Bible Language

2 Chronicles 9 (2THESSALONIANS_1_11)

Versions

KNV   ಶೆಬದ ರಾಣಿಯು ಸೊಲೊಮೋನನ ಕೀರ್ತಿಯನ್ನು ಕೇಳಿದಾಗ ಒಗಟುಗಳಿಂದ ಅವನನ್ನು ಶೋಧಿಸಲು ಅವಳು ಮಹಾಗುಂಪಿನ ಸಂಗಡ ಸುಗಂಧಗಳನ್ನೂ ಬಹು ಬಂಗಾರವನ್ನೂ ಅಮೂಲ್ಯವಾದ ಕಲ್ಲುಗಳನ್ನೂ ಹೊತ್ತುಕೊಂಡಿರುವ ಒಂಟೆಗಳ ಸಂಗಡ ಯೆರೂಸಲೇಮಿಗೆ ಬಂದಳು. ಅವಳು ಸೊಲೊಮೋನನ ಬಳಿಗೆ ಬಂದ ಮೇಲೆ ತನ್ನ ಹೃದಯದಲ್ಲಿದ್ದ ಎಲ್ಲವನ್ನು ಅವನ ಸಂಗಡ ಮಾತಾ ಡಿದಳು.
ERVKN   ಸೊಲೊಮೋನನ ಪ್ರಖ್ಯಾತಿಯನ್ನು ಶೆಬದ ರಾಣಿಯು ಕೇಳಿ ಅವನನ್ನು ಕಠಿಣವಾದ ಪ್ರಶ್ನೆಗಳಿಂದ ಪರೀಕ್ಷಿಸುವದಕ್ಕಾಗಿ ಜೆರುಸಲೇಮಿಗೆ ಬಂದಳು. ಆಕೆಯು ದೊಡ್ಡ ಪರಿವಾರದೊಂದಿಗೆ ಬಂದಳು. ಜೊತೆಗೆ ಒಂಟೆಗಳ ಮೇಲೆ ಸುಗಂಧದ್ರವ್ಯವನ್ನೂ ಅಪರಿಮಿತವಾದ ಬಂಗಾರವನ್ನೂ ವಜ್ರವೈಢೂರ್ಯಗಳನ್ನೂ ಹೇರಿಕೊಂಡು ಬಂದಳು. ಅಲ್ಲಿ ಆಕೆ ಸೊಲೊಮೋನನ ಸಂಗಡ ಮಾತನಾಡಿ ತನ್ನಲ್ಲಿದ್ದ ಎಷ್ಟೋ ಪ್ರಶ್ನೆಗಳನ್ನು ಕೇಳಿದಳು.