Bible Language

2 Samuel 20 (AKJV) American King James Version

Versions

KNV   ಬೆನ್ಯಾವಿಾನನ ಕುಲದವನಾದ ಬಿಕ್ರೀಯಮಗನಾಗಿರುವ ಶೆಬನೆಂಬ ಹೆಸರುಳ್ಳ ಬೆಲಿಯಾಳನವನಾದ ಒಬ್ಬನು ಅಲ್ಲಿದ್ದನು. ಅವನು ತುತೂರಿಯನ್ನು ಊದಿ--ನಮಗೆ ದಾವೀದನಲ್ಲಿ ಪಾಲಿಲ್ಲ; ಇಷಯನ ಮಗನಲ್ಲಿ ನಮಗೆ ಬಾಧ್ಯತೆಯೂ ಇಲ್ಲ. ಇಸ್ರಾಯೇಲ್ಯರೇ, ನಿಮ್ಮ ನಿಮ್ಮ ಗುಡಾರಗಳಿಗೆ ಹೋಗಿರಿ ಅಂದನು.
ERVKN   ಬಿಕ್ರೀಯ ಮಗನಾದ ಶೆಬ ಅಲ್ಲಿದ್ದನು. ಇವನು ದುಷ್ಟನಾಗಿದ್ದನು; ಬೆನ್ಯಾಮೀನ್ ಕುಲದವನಾಗಿದ್ದ ಇವನು, ತುತ್ತೂರಿಯನ್ನು ಊದುತ್ತಾ, “ದಾವೀದನಲ್ಲಿ ನಮ್ಮ ಪಾಲು ಏನೂ ಇಲ್ಲ. ಇಷಯನ ಮಗನಲ್ಲಿ ನಮಗೇನೂ ಇಲ್ಲ. ನಾವೆಲ್ಲ, ಅಂದರೆ ಇಸ್ರೇಲರೆಲ್ಲ ನಮ್ಮನಮ್ಮ ಗುಡಾರಗಳಿಗೆ ಹೋಗೋಣ” ಎಂದು ಹೇಳಿದನು.
IRVKN   {ಶೆಬನ ದಂಗೆ} PS ಆಕಸ್ಮಾತ್ತಾಗಿ ಬೆನ್ಯಾಮೀನ ಕುಲದವನೂ, ಬಿಕ್ರೀಯ ಮಗನೂ ಆದ ಶೆಬನೆಂಬ ಒಬ್ಬ ದುಷ್ಟಮನುಷ್ಯನು ಅಲ್ಲಿ ಹೇಗೋ ಬಂದಿದ್ದನು. ಅವನು ಕಹಳೆಯನ್ನು ಊದಿ, “ಇಸ್ರಾಯೇಲರೇ, ದಾವೀದನಲ್ಲಿ ನಮಗೆ ಪಾಲಿಲ್ಲ. ಇಷಯನ ಮಗನಲ್ಲಿ ನಮಗೆ ಸ್ವತ್ತು ಇಲ್ಲ. ಪ್ರತಿಯೊಬ್ಬನೂ ನಮ್ಮ ನಮ್ಮ ನಿವಾಸಗಳಿಗೆ ಹೋಗೋಣ” ಎಂದನು.