Bible Language

2 Chronicles 18:33 (AKJV) American King James Version

Versions

KNV   ಆದರೆ ಒಬ್ಬನು ಗುರಿಯಿಡದೆ ಬಿಲ್ಲಿಗೆ ಬಾಣ ವನ್ನೇರಿಸಿ ಇಸ್ರಾಯೇಲಿನ ಅರಸನನ್ನು ಕವಚದ ಸಂದು ಗಳಲ್ಲಿ ಹೊಡೆದನು. ಆದದರಿಂದ ಅವನು ತನ್ನ ಸಾರಥಿಗೆ--ನೀನು ನಿನ್ನ ಕೈಯನ್ನು ತಿರುಗಿಸಿ ನನ್ನನ್ನು ಸೈನ್ಯದೊಳಗಿಂದ ಆಚೇಕಡೆ ತೆಗೆದುಕೊಂಡು ಹೋಗು; ನಾನು ಗಾಯಪಟ್ಟಿದ್ದೇನೆ ಅಂದನು.
ERVKN   ಆದರೆ ಒಬ್ಬ ಸಿಪಾಯಿಯು ಬಿಲ್ಲು ತೆಗೆದು ಬಾಣವನ್ನು ಹೂಡಿ ಗುರಿಯಿಲ್ಲದೆ ಹೊಡೆದಾಗ ಬಾಣವು ಬಂದು ಇಸ್ರೇಲರ ರಾಜನಾದ ಅಹಾಬನಿಗೆ ತಾಗಿತು. ಅವನ ಕವಚದ ಸಂದಿನಿಂದ ಅವನ ದೇಹದೊಳಗೆ ಹೊಕ್ಕಿತು. ಆಗ ಅವನು ತನ್ನ ರಥವನ್ನೋಡಿಸುವ ರಾಹುತನಿಗೆ, “ರಥವನ್ನು ಹಿಂದಕ್ಕೆ ತಿರುಗಿಸಿ ನನ್ನನ್ನು ರಣರಂಗದಿಂದ ಹೊರಕ್ಕೆ ಕರೆದುಕೊಂಡು ಹೋಗು. ನಾನು ಗಾಯಗೊಂಡಿದ್ದೇನೆ” ಅಂದನು.
IRVKN   ಅರಾಮ್ಯರ ಒಬ್ಬ ಸೈನಿಕನು ಗುರಿಯಿಡದೆ ಸುಮ್ಮನೆ ಒಂದು ಬಾಣವನ್ನೆಸೆಯಲು, ಬಾಣವು ಇಸ್ರಾಯೇಲರ ಅರಸನಿಗೆ, ಅವನ ಕವಚದ ಸಂದಿನಲ್ಲಿ ತಾಕಿತು. ಆಗ ಅವನು ತನ್ನ ಸಾರಥಿಗೆ, “ರಥವನ್ನು ತಿರುಗಿಸಿ ನನ್ನನ್ನು ರಣರಂಗದಿಂದ ಆಚೆಗೆ ತೆಗೆದುಕೊಂಡು ಹೋಗು; ನನಗೆ ದೊಡ್ಡ ಗಾಯವಾಗಿದೆ” ಎಂದು ಹೇಳಿದನು.