Bible Language

2 Samuel 20:3 (AKJV) American King James Version

Versions

KNV   ದಾವೀದನು ಯೆರೂಸಲೇಮಿನಲ್ಲಿರುವ ತನ್ನ ಮನೆಗೆ ಬಂದನು; ಅರಸನು ಮನೆಯಲ್ಲಿ ಕಾಯಲಿಟ್ಟ ಉಪಪತ್ನಿಗಳಾದ ಹತ್ತುಮಂದಿ ಸ್ತ್ರೀಯರನ್ನು ತೆಗೆದು ಕೊಂಡು ಅವರನ್ನು ಒಂದು ಕಾವಲಿನಲ್ಲಿ ಇರಿಸಿ ಸಾಕುತ್ತಿದ್ದನು. ಆದರೆ ಅವರನ್ನು ತಿರುಗಿ ಕೂಡಲಿಲ್ಲ. ಹಾಗೆಯೇ ಅವರು ಸಾಯುವ ದಿವಸದ ವರೆಗೂ ಕಾವಲಲ್ಲಿ ಇರಿಸಲ್ಪಟ್ಟು ವಿಧವೆಯರ ಹಾಗೆಯೇ ಬದುಕಿದರು.
ERVKN   ದಾವೀದನು ಜೆರುಸಲೇಮಿನ ತನ್ನ ಅರಮನೆಗೆ ಬಂದನು. ದಾವೀದನು ಮನೆಕಾಯಲು ಬಿಟ್ಟುಹೋದ ತನ್ನ ಹತ್ತುಮಂದಿ ಉಪಪತ್ನಿಯರನ್ನು ಒಂದು ಮನೆಯಲ್ಲಿ ಇಟ್ಟಿದ್ದನು. ಮನೆಯನ್ನು ಕಾವಲುಗಾರರು ಕಾಯುತ್ತಿದ್ದರು. ಹೆಂಗಸರು ತಾವು ಸಾಯುವವರೆಗೆ ಮನೆಯಲ್ಲಿಯೇ ನೆಲೆಸಿದ್ದರು. ದಾವೀದನು ಅವರಿಗೆ ಆಹಾರ ವಸ್ತ್ರಗಳನ್ನು ಕೊಟ್ಟನು. ಆದರೆ ಅವನು ಅವರೊಂದಿಗೆ ಮಲಗಿಕೊಳ್ಳಲಿಲ್ಲ. ಅವರು ಸಾಯುವವರೆಗೆ ವಿಧವೆಯರಂತಿದ್ದರು.
IRVKN   ಅರಸನಾದ ದಾವೀದನು ಯೆರೂಸಲೇಮಿಗೆ ಬಂದ ಮೇಲೆ ತಾನು ಅರಮನೆ ಕಾಯುವುದಕ್ಕೋಸ್ಕರ ಇಟ್ಟಿದ್ದ ತನ್ನ ಹತ್ತು ಮಂದಿ ಉಪಪತ್ನಿಯರನ್ನು ಪ್ರತ್ಯೇಕವಾಗಿ ಒಂದು ಮನೆಯಲ್ಲಿಟ್ಟು, ಅವರಿಗೆ ಅನ್ನವಸ್ತ್ರ ಕೊಡುತ್ತಿದ್ದನು. ಆದರೆ ಅವರನ್ನು ತಿರುಗಿ ಸಂಗಮಿಸಲಿಲ್ಲ. ಅವರು ಜೀವದಿಂದಿರುವವರೆಗೂ ವಿಧೆವೆಯರಂತಿದ್ದು ಕಾವಲಲ್ಲಿ ಇರಬೇಕಾಯಿತು. PS