Bible Language

2 Samuel 20:8 (AKJV) American King James Version

Versions

KNV   ಅವರು ಗಿಬ್ಯದ ಸವಿಾಪದಲ್ಲಿರುವ ದೊಡ್ಡಕಲ್ಲಿನ ಬಳಿಗೆ ಬಂದಾಗ ಅಮಾಸನು ಅವರ ಮುಂದೆ ಹೋದನು. ಆದರೆ ಯೋವಾಬನು ತಾನು ತೊಟ್ಟು ಕೊಂಡಿರುವ ಅಂಗಿಯ ಮೇಲೆ ಒಂದು ನಡು ಕಟ್ಟನ್ನು ಕಟ್ಟಿಕೊಂಡಿದ್ದನು. ಅದರಲ್ಲಿ ಒರೆಯ ಸಂಗಡ ಒಂದು ಕತ್ತಿಯು ಅವನ ನಡುವಿನಲ್ಲಿ ತೂಗುತ್ತಿತ್ತು. ಅವನು ನಡೆಯುವಾಗ ಅದು ಬಿತ್ತು.
ERVKN   ಯೋವಾಬನು ತನ್ನ ಸೈನ್ಯದೊಂದಿಗೆ ಗಿಬ್ಯೋನಿನಲ್ಲಿದ್ದ “ದೊಡ್ಡ ಕಲ್ಲಿನ” ಬಳಿಗೆ ಬಂದಾಗ, ಅಮಾಸನು ಅವರನ್ನು ಸಂಧಿಸಲು ಬಂದನು. ಯೋವಾಬನು ತನ್ನ ಸಮವಸ್ತ್ರಗಳನ್ನು ಧರಿಸಿದ್ದನು. ಸೊಂಟಪಟ್ಟಿಯನ್ನು ಕಟ್ಟಿಕೊಂಡಿದ್ದನು. ಅವನ ಖಡ್ಗವು ಒರೆಯಲ್ಲಿತ್ತು. ಅವನು ಅಮಾಸನನ್ನು ಸಂಧಿಸಲು ಮುಂದೆ ಸಾಗಿದಾಗ, ಅವನ ಖಡ್ಗವು ಒರೆಯಿಂದ ಹೊರಗೆ ಬಿದ್ದಿತು. ಯೋವಾಬನು ಖಡ್ಗವನ್ನು ಎತ್ತಿಕೊಂಡು ಅದನ್ನು ತನ್ನ ಕೈಗಳಲ್ಲಿ ಹಿಡಿದುಕೊಂಡನು.
IRVKN   ಅವರು ಗಿಬ್ಯೋನಿನಲ್ಲಿದ್ದ ದೊಡ್ಡ ಕಲ್ಲನ್ನು ಸಮೀಪಿಸಿದಾಗ ಅಮಾಸನು ಅವನೆದುರು ಬಂದನು. ಯುದ್ಧವಸ್ತ್ರಗಳನ್ನು ಧರಿಸಿಕೊಂಡಿದ್ದ ಯೋವಾಬನೂ ಅವನನ್ನು ವಧಿಸುವುದಕ್ಕೆ ಹೋಗುತ್ತಿರುವಾಗ ಅವನ ಸೊಂಟಕ್ಕೆ ಕಟ್ಟಿದ ಕತ್ತಿಯೂ ಒರೆಯಿಂದ ಕೆಳಗೆ ಬಿದ್ದಿತು.