Bible Language

2 Samuel 21:17 (AKJV) American King James Version

Versions

KNV   ಆದರೆ ಚೆರೂಯಳ ಮಗನಾದ ಅಬೀಷೈಯು ಅವನಿಗೆ ಸಹಾಯವಾಗಿ ಬಂದು ಫಿಲಿಷ್ಟಿಯನನ್ನು ಹೊಡೆದು ಕೊಂದುಹಾಕಿ ದನು. ಆಗ ದಾವೀದನ ಜನರು ಅವನಿಗೆ--ನೀನು ಇಸ್ರಾಯೇಲಿನ ಬೆಳಕನ್ನು ಆರಿಸಿಬಿಡದ ಹಾಗೆ ಇನ್ನು ಮೇಲೆ ನಮ್ಮ ಸಂಗಡ ಯುದ್ಧಕ್ಕೆ ಹೊರಡಬೇಡ ಎಂದು ಅವನಿಗೆ ಆಣೆಯಿಟ್ಟರು.
ERVKN   ಆದರೆ ಚೆರೂಯಳ ಮಗನಾದ ಅಬೀಷೈ ಫಿಲಿಷ್ಟಿಯನನ್ನು ಕೊಂದು ದಾವೀದನನ್ನು ರಕ್ಷಿಸಿದನು. ಆಗ ದಾವೀದನ ಜನರು ಅವನಿಂದ ವಿಶೇಷ ಪ್ರಮಾಣವನ್ನು ಮಾಡಿಸಿದರು. ಅವರು ಅವನಿಗೆ, “ನೀನು ನಮ್ಮೊಂದಿಗೆ ಇನ್ನು ಮೇಲೆ ಯುದ್ಧಕ್ಕೆ ಬರಬಾರದು. ನೀನು ಯುದ್ಧಕ್ಕೆ ಹೋಗಿ ಕೊಲ್ಲಲ್ಪಟ್ಟರೆ, ಇಸ್ರೇಲಿನ ಅತ್ಯಂತ ಮಹಾಪುರುಷನನ್ನು ಕಳೆದುಕೊಂಡಂತಾಗುತ್ತದೆ” ಎಂದು ಹೇಳಿದರು.
IRVKN   ಆದರೆ ಚೆರೂಯಳ ಮಗನಾದ ಅಬೀಷೈಯು ದಾವೀದನ ಸಹಾಯಕ್ಕೆ ಬಂದು, ಫಿಲಿಷ್ಟಿಯನನ್ನು ಕೊಂದು ಹಾಕಿದನು. ಆಗ ಜನರು ದಾವೀದನಿಗೆ, “ಇಸ್ರಾಯೇಲರ ದೀಪವು ಆರಿಹೋಗದಂತೆ ನೀನು ಇನ್ನು ಮುಂದೆ ನಮ್ಮ ಜೊತೆಯಲ್ಲಿ ಯುದ್ಧಕ್ಕೆ ಬರಬಾರದು” ಎಂದು ಖಂಡಿತವಾಗಿ ಹೇಳಿದನು.