Bible Language

Zechariah 10:2 (AKJV) American King James Version

Versions

KNV   ವಿಗ್ರಹಗಳು ವ್ಯರ್ಥವಾಗಿ ಮಾತ ನಾಡಿವೆ; ಶಕುನಗಾರರು ಸುಳ್ಳನ್ನು ನೋಡಿದ್ದಾರೆ; ಮೋಸವಾದ ಕನಸುಗಳನ್ನು ತಿಳಿಸಿದ್ದಾರೆ; ವ್ಯರ್ಥವಾಗಿ ಆದರಿಸುತ್ತಾರೆ; ಆದದರಿಂದ ಮಂದೆಯ ಹಾಗೆ ತಮ್ಮ ದಾರಿಯಲ್ಲಿ ಹೋಗಿದ್ದಾರೆ; ಕುರುಬನಿಲ್ಲದ ಕಾರಣ ಕಳವಳಗೊಂಡಿದ್ದಾರೆ.
ERVKN   ಜನರು ಭವಿಷ್ಯವನ್ನು ತಿಳಿಯುವುದಕ್ಕೆ ತಮ್ಮ ಸಣ್ಣ ಬೊಂಬೆಗಳನ್ನೋ ಮಂತ್ರಜಾಲವನ್ನೋ ಉಪಯೋಗಿಸುವರು. ಆದರೆ ಅವೆಲ್ಲಾ ನಿಷ್ಪ್ರಯೋಜಕ. ಜನರು ದರ್ಶನವನ್ನು ನೋಡುವರು ಮತ್ತು ಕನಸುಗಳ ಬಗ್ಗೆ ಹೇಳುವರು. ಆದರೆ ಅವುಗಳೆಲ್ಲಾ ನಿಷ್ಪ್ರಯೋಜಕ ಸುಳ್ಳುಗಳಾಗಿವೆ. ಆದ್ದರಿಂದ ಜನರು ಸಹಾಯಕ್ಕಾಗಿ ಕೂಗುತ್ತಾ ಅತ್ತಿಂದಿತ್ತ ತಿರುಗಾಡುವ ಕುರಿಗಳಂತಿದ್ದಾರೆ. ಅವುಗಳನ್ನು ನಡಿಸಲು ಕುರುಬರೇ ಇಲ್ಲ.
IRVKN   ವಿಗ್ರಹಗಳು ನುಡಿಯುವುದು ಸುಳ್ಳು; ಕಣಿಹೇಳುವವರು ದರ್ಶನವನ್ನು ಕಾಣುವುದು ಸುಳ್ಳು,
ತಿಳಿಸುವ ಕನಸುಗಳು ಮೋಸವಾದವುಗಳು, ಹೇಳುವ ಸಮಾಧಾನವು ವ್ಯರ್ಥ.
ಆದುದರಿಂದ ನನ್ನ ಜನರು ದಿಕ್ಕಾಪಾಲಾಗಿದ್ದಾರೆ; ಕುರುಬನು ಇಲ್ಲದ ಕಾರಣ ಬಾಧೆಗೆ ಒಳಗಾಗಿದ್ದಾರೆ. PS