Versions
KNV ಹೆಚ್ಚುಕಡಿಮೆ ಮೂರು ತಿಂಗಳಾದ ಮೇಲೆ ಯೆಹೂದನಿಗೆ--ನಿನ್ನ ಸೊಸೆಯಾದ ತಾಮಾರಳು ಜಾರತ್ವ ಮಾಡಿದ್ದಾಳೆ; ಜಾರತ್ವದಿಂದ ಗರ್ಭಿಣಿಯಾಗಿ ದ್ದಾಳೆ ಎಂದು ತಿಳಿಸಿದರು. ಆಗ ಯೆಹೂದನು--ಅವಳನ್ನು ಹೊರಗೆ ತನ್ನಿರಿ, ಅವಳು ಸುಡಲ್ಪಡಲಿ ಅಂದನು.
ERVKN ಮೂರು ತಿಂಗಳಾದ ಬಳಿಕ, ಯಾರೋ ಒಬ್ಬನು ಯೆಹೂದನಿಗೆ, “ನಿನ್ನ ಸೊಸೆಯಾದ ತಾಮಾರಳು ವ್ಯಭಿಚಾರದಿಂದ ಗರ್ಭಿಣಿಯಾಗಿದ್ದಾಳೆ” ಎಂದು ತಿಳಿಸಿದನು. ಆಗ ಯೆಹೂದನು, “ಆಕೆಯನ್ನು ಎಳೆದುಕೊಂಡು ಹೋಗಿ ಸುಟ್ಟುಬಿಡಿ” ಎಂದು ಹೇಳಿದನು.
IRVKN ಸುಮಾರು ಮೂರು ತಿಂಗಳಾದ ಮೇಲೆ ಯೆಹೂದನಿಗೆ, “ನಿನ್ನ ಸೊಸೆಯಾದ ತಾಮಾರಳು ವ್ಯಭಿಚಾರದಿಂದ ಬಸುರಾಗಿದ್ದಾಳೆ” ಎಂಬ ವರ್ತಮಾನವನ್ನು ತಿಳಿಸಿದರು. ಆಗ ಯೆಹೂದನು, “ಆಕೆಯನ್ನು ಹೊರಗೆ ಕರತನ್ನಿರಿ, ಆಕೆಯನ್ನು ಸುಡಬೇಕು” ಎಂದು ಹೇಳಿದನು.