Bible Language

Joshua 24:22 (AKJV) American King James Version

Versions

KNV   ಯೆಹೋಶುವನು ಜನರಿಗೆ--ನೀವು ಕರ್ತನನ್ನು ಸೇವಿಸುವದಕ್ಕೆ ಆತನನ್ನು ಆದು ಕೊಂಡಿರು ವಿರೆಂದು ನಿಮಗೆ ನೀವೇ ಸಾಕ್ಷಿಗಳಾಗಿದ್ದೀರಿ ಅಂದನು.
ERVKN   ಅದಕ್ಕೆ ಯೆಹೋಶುವನು, “ನೀವು ನಿಮ್ಮನ್ನೂ ನಿಮ್ಮ ಸುತ್ತಲಿರುವ ಜನರನ್ನೂ ನೋಡಿರಿ. ನೀವು ಯೆಹೋವನ ಸೇವೆಯನ್ನೇ ಆರಿಸಿಕೊಂಡಿದ್ದೀರಿ ಎಂಬುದು ನಿಮ್ಮೆಲ್ಲರಿಗೆ ಗೊತ್ತು ಮತ್ತು ಅದಕ್ಕೆ ನೀವು ಒಪ್ಪಿದ್ದೀರಿ. ನೀವೆಲ್ಲರೂ ಇದಕ್ಕೆ ಸಾಕ್ಷಿಯಾಗಿರುವಿರಾ?” ಎಂದು ಕೇಳಿದನು. ಜನರು, “ಹೌದು, ಇದು ನಿಜ! ನಾವೆಲ್ಲರು ಯೆಹೋವನ ಸೇವೆಯನ್ನೇ ಆರಿಸಿಕೊಂಡಿದ್ದೇವೆ” ಎಂದು ಉತ್ತರಿಸಿದರು.
IRVKN   ಯೆಹೋಶುವನು ಅವರಿಗೆ, “ನೀವು ಯೆಹೋವನ ಸೇವೆಯನ್ನು ಆರಿಸಿಕೊಂಡಿರುವುದಕ್ಕೆ ನೀವೇ ಸಾಕ್ಷಿಗಳು ಅನ್ನಲು ಅವರು ಹೌದು ನಾವೇ ಸಾಕ್ಷಿಗಳು” ಎಂದರು