Bible Language

Judges 10 (AKJV) American King James Version

Versions

KNV   ಅಬೀಮೆಲೆಕನ ತರುವಾಯ ಇಸ್ಸಾಕಾರನ ಕುಲದ ದೋದೋವಿನ ಮಗನಾದ ಪೂವನ ಮಗನಾದ ತೋಲನು ಇಸ್ರಾಯೇಲ್ಯರನ್ನು ರಕ್ಷಿಸುವದಕ್ಕೆ ಎದ್ದನು. ಅವನು ಎಫ್ರಾಯಾಮ್‌ ಬೆಟ್ಟದ ಸೀಮೆಯ ಶಾವಿಾರದಲ್ಲಿ ವಾಸಮಾಡಿದನು.
ERVKN   ಅಬೀಮೆಲೆಕನು ಸತ್ತ ತರುವಾಯ ಇಸ್ರೇಲರನ್ನು ರಕ್ಷಿಸಲು ಯೆಹೋವನು ಮತ್ತೊಬ್ಬ ನ್ಯಾಯಾಧೀಶನನ್ನು ಕಳುಹಿಸಿದನು. ಅವನ ಹೆಸರು ತೋಲ. ತೋಲನು ಪೂವನ ಮಗನು. ಪೂವನು ದೋದೋ ಎಂಬವನ ಮಗನು. ತೋಲನು ಇಸ್ಸಾಕಾರ್ ಕುಲಕ್ಕೆ ಸೇರಿದವನೂ ಶಾಮೀರ ನಗರದ ವಾಸಿಯೂ ಆಗಿದ್ದನು. ಶಾಮೀರ ನಗರವು ಎಫ್ರಾಯೀಮ್ ಬೆಟ್ಟಪ್ರದೇಶದಲ್ಲಿತ್ತು.
IRVKN   {ತೋಲಾ} PS ಅಬೀಮೆಲೆಕನ ಮರಣದ ತರುವಾಯ ಇಸ್ಸಾಕಾರ್ ಕುಲದ ಪೂವನ ಮಗನೂ, ದೋದೋವಿನ ಮೊಮ್ಮಗನೂ ಆಗಿದ್ದ ತೋಲನು ಇಸ್ರಾಯೇಲ್ಯರನ್ನು ರಕ್ಷಿಸಿವುದಕ್ಕೋಸ್ಕರ ಎದ್ದನು. ಅವನು ಎಫ್ರಾಯೀಮ್ ಬೆಟ್ಟದ ಸೀಮೆಯ ಶಾಮೀರೆಂಬ ಊರಲ್ಲಿ ವಾಸವಾಗಿದ್ದನು.