Bible Language

Judges 16:3 (AKJV) American King James Version

Versions

KNV   ಆದರೆ ಸಂಸೋ ನನು ಅರ್ಧ ರಾತ್ರಿಯ ವರೆಗೆ ಮಲಗಿದ್ದು ಅರ್ಧ ರಾತ್ರಿಯಲ್ಲಿ ಎದ್ದು ಪಟ್ಟಣದ ಬಾಗಲ ಕದಗಳನ್ನೂ ಅದರ ಎರಡು ತೋಳುಗಳನ್ನೂ ಹಿಡಿದು ಅಗುಳಿ ಸಹ ಕಿತ್ತು ತನ್ನ ಹೆಗಲ ಮೇಲೆ ಹೊತ್ತುಕೊಂಡು ಹೋಗಿ ಹೆಬ್ರೋನಿಗೆ ಎದುರಾಗಿರುವ ಪರ್ವತ ಶಿಖರದ ಮೇಲಕ್ಕೆ ಹೋದನು.
ERVKN   ಆದರೆ ಸಂಸೋನನು ವೇಶ್ಯೆಯ ಜೊತೆಯಲ್ಲಿ ಮಧ್ಯರಾತ್ರಿಯವರೆಗೆ ಮಾತ್ರ ಇದ್ದನು. ಸಂಸೋನನು ಮಧ್ಯರಾತ್ರಿಯಲ್ಲಿ ಎದ್ದುಬಿಟ್ಟನು. ಸಂಸೋನನು ನಗರ ದ್ವಾರದ ಬಾಗಿಲನ್ನು ಗಟ್ಟಿಯಾಗಿ ಹಿಡಿದು ಎಳೆದನು. ಕದಗಳು ಗೋಡೆಗಳಿಂದ ಕಿತ್ತುಬಂದವು. ಸಂಸೋನನು ಬಾಗಿಲಕದಗಳನ್ನೂ ಅದರ ನಿಲುವು ಪಟ್ಟಿಗಳನ್ನೂ ಅಗುಳಿಗಳನ್ನೂ ಕಿತ್ತು ತನ್ನ ಹೆಗಲ ಮೇಲೆ ಹೊತ್ತು ಹೆಬ್ರೋನ್ ನಗರದ ಹತ್ತಿರವಿರುವ ಪರ್ವತ ಶಿಖರಕ್ಕೆ ತೆಗೆದುಕೊಂಡು ಹೋದನು.
IRVKN   ಸಂಸೋನನು ಮಲಗಿ ಮಧ್ಯರಾತ್ರಿಯಲ್ಲೆದ್ದು ಊರು ಬಾಗಿಲಿನ ಕದಗಳನ್ನೂ, ಅದರ ಎರಡು ನಿಲುವುಪಟ್ಟಿಗಳನ್ನೂ, ಅಗುಳಿಗಳನ್ನೂ ಕಿತ್ತು, ಹೆಗಲ ಮೇಲೆ ಹೊತ್ತುಕೊಂಡು ಹೋಗಿ ಹೆಬ್ರೋನಿನ ಎದುರಿಗಿರುವ ಪರ್ವತ ಶಿಖರದ ಮೇಲೆ ಇಟ್ಟನು. PS