Bible Language

Leviticus 16:4 (AKJV) American King James Version

Versions

KNV   ಅವನು ಪರಿ ಶುದ್ಧವಾದ ನಾರುಬಟ್ಟೆಯ ಮೇಲಂಗಿಯನ್ನು ತೊಟ್ಟು ಕೊಂಡು ತನ್ನ ಶರೀರದ ಮೇಲೆ ನಾರುಬಟ್ಟೆಯ ಇಜಾರುಗಳನ್ನು ಹಾಕಿಕೊಳ್ಳಬೇಕು ಮತ್ತು ನಾರಿನ ನಡುಕಟ್ಟನ್ನು ಕಟ್ಟಿಕೊಂಡು ನಾರಿನ ಮುಂಡಾಸವನ್ನು ಧರಿಸಬೇಕು. ಇವು ಪವಿತ್ರವಾದ ಉಡುಪುಗಳು; ಆದಕಾರಣ ಅವನು ತನ್ನ ಶರೀರವನ್ನು ನೀರಿನಿಂದ ತೊಳೆದುಕೊಂಡು ಅವುಗಳನ್ನು ಧರಿಸಿಕೊಳ್ಳಬೇಕು.
ERVKN   ಆರೋನನು ತನ್ನ ಪೂರ್ಣಶರೀರವನ್ನು ನೀರಿನಿಂದ ತೊಳೆದುಕೊಳ್ಳಬೇಕು. ಬಳಿಕ ಅವನು ಬಟ್ಟೆಗಳನ್ನು ಹಾಕಿಕೊಳ್ಳಬೇಕು. ಆರೋನನು ಪವಿತ್ರ ನಾರಿನ ನಿಲುವಂಗಿಯನ್ನೂ ನಾರಿನ ಚಡ್ಡಿಯನ್ನೂ ಧರಿಸಿಕೊಂಡಿರಬೇಕು. ಅವನು ನಾರಿನ ನಡುಕಟ್ಟನ್ನು ಕಟ್ಟಿಕೊಳ್ಳಬೇಕು; ನಾರಿನ ಮುಂಡಾಸವನ್ನು ಇಟ್ಟುಕೊಳ್ಳಬೇಕು. ಇವುಗಳು ಪವಿತ್ರವಾದವುಗಳಾಗಿವೆ.
IRVKN   ಅವನು ಪರಿಶುದ್ಧವಾದ ನಾರಿನ ನಿಲುವಂಗಿಯನ್ನು ತೊಟ್ಟುಕೊಂಡು, ನಾರಿನ ಒಳಉಡುಪನ್ನು ಹಾಕಿಕೊಂಡು, ನಾರಿನ ನಡುಕಟ್ಟನ್ನು ಕಟ್ಟಿಕೊಂಡು ಮತ್ತು ತಲೆಗೆ ನಾರಿನ ಪೇಟವನ್ನು ಸುತ್ತಿಕೊಳ್ಳಬೇಕು. ಅವು ದೀಕ್ಷಾವಸ್ತ್ರಗಳಾದುದರಿಂದ ಅವನು ಅವುಗಳನ್ನು ಧರಿಸಿಕೊಳ್ಳುವುದಕ್ಕೆ ಮುಂಚೆ ಸ್ನಾನಮಾಡಬೇಕು.