Bible Language

Leviticus 20:25 (AKJV) American King James Version

Versions

KNV   ಆದದರಿಂದ ನೀವು ಶುದ್ಧವಾದ ಮತ್ತು ಅಶುದ್ಧವಾದ ಪಶುಗಳ ಮಧ್ಯದಲ್ಲಿಯೂ ಅಶುದ್ಧವಾದ ಮತ್ತು ಶುದ್ಧವಾದ ಪಕ್ಷಿಗಳ ಮಧ್ಯದಲ್ಲಿಯೂ ವ್ಯತ್ಯಾಸ ಮಾಡಬೇಕು. ಇದಲ್ಲದೆ ನಾನು ನಿಮ್ಮಿಂದ ಪ್ರತ್ಯೇಕಿಸಿದ ಅಶುದ್ಧವಾದ ಪಶುಗಳಿಂದಲೂ ಪಕ್ಷಿಗಳಿಂದಲೂ ಭೂಮಿಯ ಮೇಲೆ ಚಲಿಸುವ ಯಾವ ತರವಾದ ಜೀವಿಯಿಂದಲೂ ನೀವು ನಿಮ್ಮನ್ನು ಅಶುದ್ಧಮಾಡಿ ಕೊಳ್ಳಬಾರದು.
ERVKN   ಆದ್ದರಿಂದ ಶುದ್ಧವಾದ ಪ್ರಾಣಿಗಳನ್ನು ಅಶುದ್ಧವಾದ ಪ್ರಾಣಿಗಳಿಗಿಂತ ಭಿನ್ನವಾಗಿ ಕಾಣಬೇಕು. ನೀವು ಶುದ್ಧವಾದ ಪಕ್ಷಿಗಳನ್ನು ಅಶುದ್ಧವಾದ ಪಕ್ಷಿಗಳಿಗಿಂತ ಭಿನ್ನವಾಗಿ ಕಾಣಬೇಕು. ಅಶುದ್ಧವಾದ ಪಕ್ಷಿಗಳಲ್ಲಿ, ಪ್ರಾಣಿಗಳಲ್ಲಿ ಮತ್ತು ನೆಲದ ಮೇಲೆ ಹರಿದಾಡುವ ಪ್ರಾಣಿಗಳಲ್ಲಿ ಯಾವುದನ್ನೂ ತಿನ್ನಬೇಡಿರಿ. ನಾನು ಅವುಗಳನ್ನು ಅಶುದ್ಧವಾಗಿ ಮಾಡಿದ್ದೇನೆ.
IRVKN   “ ‘ನೀವು ಶುದ್ಧ ಮತ್ತು ಅಶುದ್ಧ ಪಶುಗಳನ್ನು ಹಾಗು ಪಕ್ಷಿಗಳನ್ನು ಪ್ರತ್ಯೇಕಿಸುವ ವಿವೇಚನೆ ಹೊಂದಿರಬೇಕು. ನಾನು ಅಶುದ್ಧವೆಂದು ನಿರ್ಣಯಿಸಿರುವ ಯಾವ ಪಶು, ಪಕ್ಷಿ ಹಾಗು ಕ್ರಿಮಿಕೀಟಗಳಿಂದಲೂ ನಿಮ್ಮನ್ನು ಅಸಹ್ಯಮಾಡಿಕೊಳ್ಳಬಾರದು.