Versions
KNV ಇದಲ್ಲದೆ ಅರಸನಾದ ದಾವೀದನು ಸಮಸ್ತ ಸಭೆಗೆ ಹೇಳಿದ್ದೇನಂದರೆ -- ದೇವರು ಒಬ್ಬನನ್ನೇ ಆದುಕೊಂಡ ನನ್ನ ಮಗನಾದ ಸೊಲೊ ಮೋನನು ಚಿಕ್ಕವನಾಗಿಯೂ ಮೃದುವಾಗಿಯೂ ಇದ್ದಾನೆ. ಆದರೆ ಕೆಲಸವು ದೊಡ್ಡದು; ಈ ಅರಮನೆ ಯು ಮನುಷ್ಯರಿಗೋಸ್ಕರವಲ್ಲ, ಕರ್ತನಾದ ದೇವರಿ ಗೋಸ್ಕರವೇ.
ERVKN ನೆರೆದುಬಂದಿದ್ದ ಇಸ್ರೇಲರೆಲ್ಲರಿಗೆ ದಾವೀದನು, “ದೇವರು ನನ್ನ ಮಗನಾದ ಸೊಲೊಮೋನನನ್ನು ಆರಿಸಿಕೊಂಡಿರುತ್ತಾನೆ. ಅವನು ಇನ್ನೂ ಎಳೆಪ್ರಾಯದವನಾಗಿರುವದರಿಂದ ಈ ಕಾರ್ಯವನ್ನು ಮಾಡಿಸಬೇಕಾದ ಜ್ಞಾನವು ಅವನಲ್ಲಿಲ್ಲ. ಆದರೆ ಕೆಲಸವು ಅತಿ ಘನವಾದದ್ದು. ಕಟ್ಟುವ ಆಲಯವು ಮನುಷ್ಯರಿಗಾಗಿಯಲ್ಲ. ದೇವರಾದ ಯೆಹೋವನಿಗಾಗಿಯಷ್ಟೇ.
IRVKN {ದೇವಾಲಯಕ್ಕಾಗಿ ಕೊಟ್ಟ ಕಾಣಿಕೆಗಳು} PS ತರುವಾಯ ಅರಸನಾದ ದಾವೀದನು, “ದೇವರು ನನ್ನ ಮಗನಾದ ಸೊಲೊಮೋನನನ್ನೇ ದೇವಾಲಯ ಕಟ್ಟಲು ಆರಿಸಿಕೊಂಡಿದ್ದಾನೆ. ಆದರೆ ಅವನು ಇನ್ನೂ ಎಳೇ ಪ್ರಾಯದವನು. ಮಾಡತಕ್ಕ ಕೆಲಸವೋ ವಿಶೇಷವಾದದ್ದು. ಕಟ್ಟತಕ್ಕ ಮಂದಿರವು ದೇವರಾದ ಯೆಹೋವನಿಗಾಗಿಯೇ ಹೊರತು ಮನುಷ್ಯನಿಗಾಗಿಯಲ್ಲ.