Bible Language

Exodus 32 (ASV) American Standard Version

Versions

KNV   ಮೋಶೆಯು ಬೆಟ್ಟದಿಂದ ಇಳಿದುಬರುವದರಲ್ಲಿ ತಡವಾದದ್ದನ್ನು ಜನರು ನೋಡಿದಾಗ ಅವರು ಆರೋನನ ಬಳಿಗೆ ಕೂಡಿ ಬಂದು ಅವನಿಗೆ--ನೀನು ಎದ್ದು ನಮ್ಮ ಮುಂದೆ ಹೋಗುವ ದೇವರುಗಳನ್ನು ನಮಗಾಗಿ ಮಾಡು, ಐಗುಪ್ತದೇಶದೊಳಗಿಂದ ನಮ್ಮನ್ನು ಕರೆದುಕೊಂಡು ಬಂದ ಮನುಷ್ಯನಾದ ಮೋಶೆಗೆ ಏನಾಯಿತೋ ನಮಗೆ ತಿಳಿಯದು ಅಂದರು.
ERVKN   ಬಹಳ ಸಮಯ ದಾಟಿಹೋದರೂ ಮೋಶೆ ಬೆಟ್ಟದಿಂದ ಕೆಳಗಿಳಿಯಲಿಲ್ಲವಾದ್ದರಿಂದ ಇಸ್ರೇಲರು ಆರೋನನ ಬಳಿಗೆ ಒಟ್ಟಾಗಿ ಬಂದು, “ನೋಡು, ಮೋಶೆಯು ನಮ್ಮನ್ನು ಈಜಿಪ್ಟಿನಿಂದ ಹೊರಗೆ ಕರೆದುಕೊಂಡು ಬಂದನು. ಆದರೆ ಅವನಿಗೇನಾಯಿತೊ ನಮಗೆ ತಿಳಿಯದು. ಆದ್ದರಿಂದ ನಮ್ಮನ್ನು ಮುನ್ನಡೆಸಲು ಕೆಲವು ದೇವರುಗಳನ್ನು ಮಾಡಿಕೊಡು” ಎಂದು ಹೇಳಿದರು.