Bible Language

Leviticus 5:12 (ASV) American Standard Version

Versions

KNV   ತರುವಾಯ ಅವನು ಅದನ್ನು ಯಾಜಕನ ಬಳಿಗೆ ತರಬೇಕು. ಯಾಜಕನು ಜ್ಞಾಪಕಾರ್ಥವಾಗಿ ಅದರಿಂದ ತನ್ನ ಹಿಡಿ ಯಷ್ಟು ತೆಗೆದುಕೊಂಡು ಕರ್ತನಿಗೆ ಯಜ್ಞವೇದಿಯ ಮೇಲೆ ಬೆಂಕಿಯ ಅರ್ಪಣೆಗಳಿಗನುಸಾರವಾಗಿ ಸುಡ ಬೇಕು; ಅದು ಪಾಪದ ಬಲಿಯಾಗಿರುವದು.
ERVKN   ಅವನು ಹಿಟ್ಟನ್ನು ಯಾಜಕನ ಬಳಿಗೆ ತರಬೇಕು. ಯಾಜಕನು ಒಂದು ಹಿಡಿಹಿಟ್ಟನ್ನು ಅದರಿಂದ ತೆಗೆದು ದೇವಾರ್ಪಿತವಾಯಿತೆಂದು ಸೂಚಿಸುವುದಕ್ಕಾಗಿ ವೇದಿಕೆಯ ಮೇಲೆ ಹೋಮಮಾಡುವನು. ಅದು ಅಗ್ನಿಯ ಮೂಲಕ ಯೆಹೋವನಿಗೆ ಅರ್ಪಿಸಿದ ಸಮರ್ಪಣೆಯಾಗಿರುವುದು. ಅದು ಪಾಪಪರಿಹಾರಕ ಸಮರ್ಪಣೆಯಾಗಿದೆ.
IRVKN   ಅವನು ಯಾಜಕನ ಬಳಿಗೆ ಅದನ್ನು ತಂದನಂತರ ಅದು ದೈವಾರ್ಪಿತವೆಂದು ಸೂಚಿಸುವುದಕ್ಕಾಗಿ ಯಾಜಕನು ಅದರಲ್ಲಿ ಒಂದು ಹಿಡಿಯನ್ನು ತೆಗೆದುಕೊಂಡು ಯೆಹೋವನಿಗೆ ಸಮರ್ಪಿಸಿದ ಹೋಮದ್ರವ್ಯಗಳ ಮೇಲೆ ಯಜ್ಞವೇದಿಯಲ್ಲಿ ಹೋಮಮಾಡಬೇಕು; ಅದು ದೋಷಪರಿಹಾರಕ ಯಜ್ಞ.