Versions
KNV ಅದು ಸಭೆಗೆ ತಿಳಿಯದೆ ತಪ್ಪು ಆಗಿರುವ ಪಕ್ಷದಲ್ಲಿ ಸಭೆಯು ಕರ್ತನಿಗೆ ಸುವಾಸನೆಯಾದ ದಹನ ಬಲಿಗಾಗಿ ಒಂದು ಎಳೇ ಹೋರಿಯನ್ನೂ ಕ್ರಮದ ಪ್ರಕಾರ ಅದರ ಆಹಾರದ ಅರ್ಪಣೆಯನ್ನೂ ಪಾನದ ಅರ್ಪಣೆಯನ್ನೂ ಪಾಪ ಬಲಿಯಾಗಿ ಮೇಕೆಗಳಿಂದ ಒಂದು ಹೋತವನ್ನೂ ಅರ್ಪಿಸಬೇಕು.
ERVKN ನಿರುದ್ದೇಶದಿಂದ ಮತ್ತು ಸಮುದಾಯಕ್ಕೆ ತಿಳಿಯದಂತೆ ಇದನ್ನು ಮಾಡಿದ್ದಾಗಿದ್ದರೆ, ಯೆಹೋವನಿಗೆ ಸುಗಂಧ ವಾಸನೆಯನ್ನು ಉಂಟುಮಾಡುವುದಕ್ಕಾಗಿ ಒಂದು ಎಳೆಹೋರಿಯನ್ನು ಸರ್ವಾಂಗಹೋಮವಾಗಿ ಅರ್ಪಿಸಬೇಕು ಮತ್ತು ಅದರೊಡನೆ ಧಾನ್ಯಾರ್ಪಣೆಯನ್ನೂ ಪಾನಾರ್ಪಣೆಯನ್ನೂ ಪಾಪಪರಿಹಾರಕ ಯಜ್ಞವಾಗಿ ಒಂದು ಹೋತವನ್ನೂ ಅರ್ಪಿಸಬೇಕು.
IRVKN ಯಾವಾಗಲಾದರೂ ಸಮೂಹದವರು ತಿಳಿಯದೆ ಮೀರಿ ದ್ರೋಹಿಗಳಾದರೆ, ಸರ್ವಸಮೂಹದವರೆಲ್ಲರು ಒಟ್ಟಾಗಿ ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವುದಕ್ಕಾಗಿ ಸರ್ವಾಂಗಹೋಮವಾಗಿ ಒಂದು ಹೋರಿಯನ್ನೂ, ನೈವೇದ್ಯಕ್ಕಾಗಿ ಅದಕ್ಕೆ ನೇಮಿತವಾದ ಧಾನ್ಯದ್ರವ್ಯಗಳನ್ನೂ ಮತ್ತು ಪಾನದ್ರವ್ಯಗಳನ್ನೂ, ದೋಷಪರಿಹಾರ ಯಜ್ಞಕ್ಕಾಗಿ ಒಂದು ಹೋತವನ್ನು ಸಮರ್ಪಿಸಬೇಕು.