Bible Language

2 Chronicles 25:16 (ERVEN) Easy to Read - English

Versions

KNV   ಅವನು ಅರ ಸನ ಸಂಗಡ ಮಾತನಾಡುತ್ತಿರುವಾಗ ಅರಸನು ಅವ ನಿಗೆ--ಅರಸನ ಯೋಚನಾಕರ್ತರಲ್ಲಿ ನೀನು ಒಬ್ಬ ನಾಗಿದ್ದೀಯೋ? ನೀನು ಯಾಕೆ ಹೊಡೆಯಲ್ಪಡಬೇಕು ಅಂದನು. ಆಗ ಪ್ರವಾದಿಯು--ನೀನು ನನ್ನ ಯೋಚನೆ ಯನ್ನು ಕೇಳದೆ ಇದನ್ನು ಮಾಡಿದ್ದರಿಂದ ದೇವರು ನಿನ್ನನ್ನು ನಾಶಮಾಡಲು ತೀರ್ಮಾನಿಸಿದ್ದಾನೆಂದು ನಾನು ಬಲ್ಲೆನು ಎಂದು ಹೇಳಿಬಿಟ್ಟನು.
ERVKN   ಪ್ರವಾದಿಯು ಮಾತುಗಳನ್ನು ಹೇಳಿದಾಗ ಅಮಚ್ಯನು, “ನಾವು ನಿನ್ನನ್ನು ಅರಸನ ಸಲಹೆಗಾರನನ್ನಾಗಿ ಮಾಡಲಿಲ್ಲವಲ್ಲಾ. ಆದುದರಿಂದ ಬಾಯಿಮುಚ್ಚಿಕೊಂಡು ಸುಮ್ಮನಿರು. ಇಲ್ಲದಿದ್ದರೆ ನೀನು ಸಾಯುವೆ” ಅಂದನು. ಆದರೆ ಅವನು, “ದೇವರು ನಿನ್ನನ್ನು ನಾಶಮಾಡಲು ನಿರ್ಧರಿಸಿದ್ದಾನೆ; ಯಾಕಂದರೆ ನೀನು ನನ್ನ ಸಲಹೆಯನ್ನು ಕೇಳದೆ ದುಷ್ಟತನ ಮಾಡುತ್ತಿರುವೆ?” ಎಂದು ಹೇಳಿದನು.
IRVKN   ಮಾತನ್ನು ಹೇಳಿದ ಪ್ರವಾದಿಗೆ ಅರಸನು, “ನಿನ್ನನ್ನು ನನಗೆ ಆಲೋಚನಾಮಂತ್ರಿಯನ್ನಾಗಿ ನೇಮಿಸಿದವರು ಯಾರು?; ಸುಮ್ಮನಿರು, ನಿನಗೆ ಪೆಟ್ಟು ಬೇಕೋ?” ಎಂದನು. ಅವನು, “ನೀನು ನನ್ನ ಬುದ್ಧಿವಾದವನ್ನು ಆಲಿಸದೆ ಹೀಗೆ ಮಾಡುತ್ತಿರುವುದರಿಂದ ದೇವರು ನಿನ್ನನ್ನು ನಾಶ ಮಾಡಬೇಕೆಂದು ನಿಶ್ಚಯಿಸಿಕೊಂಡಿದ್ದಾನೆ ಎಂಬುದನ್ನು ನಾನು ಬಲ್ಲೆ” ಎಂದು ಹೇಳಿ ಸುಮ್ಮನಾದನು. PEPS