Bible Language

2 Chronicles 8:14 (ERVEN) Easy to Read - English

Versions

KNV   ಅವನು ತನ್ನ ತಂದೆಯಾದ ದಾವೀದನ ಕ್ರಮದ ಪ್ರಕಾರ ಅವರ ಸೇವೆಗೆ ಯಾಜಕರ ಸರದಿ ಗಳನ್ನೂ ಪ್ರತಿ ದಿವಸಕ್ಕೆ ಬೇಕಾದ ಕಾರ್ಯದ ಪ್ರಕಾರ ಯಾಜಕರ ಮುಂದೆ ಸ್ತುತಿಸುವದಕ್ಕೂ ಸೇವೆಮಾಡು ವದಕ್ಕೂ ತಮ್ಮ ವಿಚಾರಗಳಲ್ಲಿ ಲೇವಿಯರನ್ನೂ ಸೇವೆಯ ಬಾಗಲಲ್ಲಿ ತಮ್ಮ ಸರದಿಗಳಾಗಿ ದ್ವಾರಪಾಲಕರನ್ನೂ ನೇಮಿಸಿದನು. ದೇವರ ಮನುಷ್ಯನಾದ ದಾವೀದನು ಹಾಗೆಯೇ ನೇಮಿಸಿದ್ದನು.
ERVKN   ದಾವೀದನು ಹೇಳಿದ ಪ್ರಕಾರ ಸೊಲೊಮೋನನು ಯಾಜಕರನ್ನು ಸರದಿಯ ಪ್ರಕಾರ ಸೇವೆಗೆ ನೇಮಿಸಿದನು. ಲೇವಿಯರನ್ನು ಆಯಾಕೆಲಸಕ್ಕೆ ನೇಮಿಸಿದನು. ಅವರು ಗಾಯನದಲ್ಲಿಯೂ ಯಾಜಕರ ಕೆಲಸಗಳಲ್ಲಿ ಸಹಾಯಕರಾಗಿಯೂ ದೇವಾಲಯದ ಕೆಲಸದಲ್ಲಿ ಪಾಲುತೆಗೆದುಕೊಂಡರು. ದ್ವಾರಪಾಲಕರ ಕೆಲಸಕ್ಕೆ ಸೊಲೊಮೋನನು ಜನರನ್ನು ಆರಿಸಿ ದ್ವಾರಗಳನ್ನು ಕಾಯುವುದಕ್ಕೆ ಅವರನ್ನು ನೇಮಿಸಿದನು. ದೇವಮನುಷ್ಯನಾದ ದಾವೀದನು ಹೀಗೆಯೇ ಮಾಡಬೇಕೆಂದು ತಿಳಿಸಿದ್ದನು.
IRVKN   ಇದಲ್ಲದೆ, ತನ್ನ ತಂದೆಯಾದ ದಾವೀದನ ಆಜ್ಞೆಗೆ ಅನುಸಾರವಾಗಿ ಯಾಜಕ ವರ್ಗಗಳನ್ನೂ, ಲೇವಿಯರನ್ನೂ ಅವರವರ ಸೇವಾವೃತ್ತಿಗೆ ನೇಮಿಸಿದನು. ಲೇವಿಯರು ಆಯಾ ದಿನದ ನೇಮದ ಪ್ರಕಾರ ದೇವರನ್ನು ಸ್ತುತಿಸಲು, ಯಾಜಕರ ಕೈಕೆಳಗೆ ಸೇವೆಮಾಡುತ್ತಲೂ ದ್ವಾರಪಾಲಕರು ತಮ್ಮ ತಮ್ಮ ವರ್ಗಗಳ ಸರದಿಯ ಮೇಲೆ ಆಯಾ ಬಾಗಿಲುಗಳನ್ನು ಕಾಯುತ್ತಲೂ ಇರಬೇಕಾಗಿತ್ತು. ದೇವರ ಮನುಷ್ಯನಾದ ದಾವೀದ ರಾಜನ ಅಪ್ಪಣೆ ಇದೇ ಆಗಿತ್ತು.