Bible Language

Judges 18:2 (ERVEN) Easy to Read - English

Versions

KNV   ಅವರು ದೇಶವನ್ನು ಪಾಳತಿ ನೋಡಿ ಶೋಧಿಸುವದಕ್ಕಾಗಿ ತಮ್ಮ ಮೇರೆಗಳಲ್ಲಿರುವ ಚೊರ್ಗದಿಂದಲೂ ಎಷ್ಟಾವೋಲಿನಿಂದಲೂ ತಮ್ಮ ಕುಟುಂಬದಲ್ಲಿ ಪರಾಕ್ರಮಶಾಲಿಗಳಾದ ಐದು ಮಂದಿ ಯನ್ನು ಕರೆದು ಅವರಿಗೆ--ನೀವು ಹೋಗಿ ದೇಶವನ್ನು ಶೋಧಿಸಿರಿ ಎಂದು ಹೇಳಿ ಕಳುಹಿಸಿದರು. ಹಾಗೆಯೇ ಇವರು ಎಫ್ರಾಯಾಮ್‌ ಬೆಟ್ಟದಲ್ಲಿರುವ ವಿಾಕನ ಮನೆಯ ಬಳಿಗೆ ಬಂದು ಅಲ್ಲಿ ಇಳುಕೊಂಡರು.
ERVKN   ದಾನ್ ಕುಲದವರು ತಮಗೆ ಭೂಮಿಯನ್ನು ಹುಡುಕುವುದಕ್ಕಾಗಿ ಐದು ಮಂದಿ ಸೈನಿಕರನ್ನು ಕಳುಹಿಸಿದರು. ಅವರು ತಮ್ಮ ವಾಸಕ್ಕಾಗಿ ಒಳ್ಳೆಯ ಸ್ಥಳವನ್ನು ಹುಡುಕಲು ಹೋದರು. ಐದು ಮಂದಿ ಚೊರ್ಗಾ ಮತ್ತು ಎಷ್ಟಾವೋಲ್ ನಗರದವರಾಗಿದ್ದರು. ಅವರು ದಾನ್ ಕುಲದವರ ಮನೆತನಕ್ಕೆ ಸೇರಿದವರಾದ ಕಾರಣ ‘ಭೂಮಿಯನ್ನು ಹುಡುಕಲು’ ಅವರನ್ನು ಕಳುಹಿಸಲಾಗಿತ್ತು. ಐದು ಜನರು ಎಫ್ರಾಯೀಮ್ ಬೆಟ್ಟದ ಸೀಮೆಗೆ ಬಂದು ಮೀಕನ ಮನೆಯಲ್ಲಿ ಇಳಿದುಕೊಂಡರು.
IRVKN   ಅವರು ಚೊರ್ಗಾ, ಎಷ್ಟಾವೋಲ್ ಎಂಬ ಊರುಗಳಿಂದ ತಮ್ಮ ಕುಲದಲ್ಲಿ ಐದು ಮಂದಿ ಪರಾಕ್ರಮಶಾಲಿಗಳಾದ ಗೂಢಚಾರರನ್ನು ಆರಿಸಿ ಅವರಿಗೆ, “ನೀವು ಹೋಗಿ ಲಯಿಷ್ ದೇಶವನ್ನು ಸಂಚರಿಸಿ ನೋಡಿರಿ” ಎಂದು ಆಜ್ಞಾಪಿಸಿ ಕಳುಹಿಸಿದರು. ಇವರು ಪ್ರಯಾಣಮಾಡುತ್ತಾ ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿದ್ದ ಮೀಕನ ಮನೆಗೆ ಬಂದು ಇಳಿದುಕೊಂಡರು.