Versions
KNV ಆಗ ಸೌಲನು--ನನ್ನ ಕೈ ಅವನ ಮೇಲೆ ಇರಬಾರದು; ಆದರೆ ಫಿಲಿಷ್ಟಿಯರ ಕೈ ಅವನ ಮೇಲೆ ಇರಲಿ ಅಂದುಕೊಂಡು ದಾವೀದನಿಗೆ--ಇಗೋ, ನನ್ನ ಹಿರಿಯ ಮಗಳಾದ ಮೇರಬಳನ್ನು ನಿನಗೆ ಹೆಂಡತಿಯಾಗಿ ಕೊಡುವೆನು; ನೀನು ನನಗೋಸ್ಕರ ಪರಾಕ್ರಮಶಾಲಿ ಯಾಗಿದ್ದು ಕರ್ತನ ಯುದ್ಧಗಳನ್ನು ನಡಿಸು ಅಂದನು.
ERVKN ಆದರೆ ಸೌಲನು ದಾವೀದನನ್ನು ಕೊಲ್ಲಬೇಕೆಂದಿದ್ದನು. ದಾವೀದನಿಗೆ ಮೋಸಮಾಡಲು ಸೌಲನು ಒಂದು ಉಪಾಯವನ್ನು ಹೂಡಿ ಅವನಿಗೆ, “ನನ್ನ ಹಿರಿಯ ಮಗಳಾದ ಮೇರಬಳು ಇದ್ದಾಳೆ. ನಾನು ಅವಳನ್ನು ನಿನಗೆ ಮದುವೆ ಮಾಡಿಕೊಡುತ್ತೇನೆ. ಆಗ ನೀನೊಬ್ಬ ಬಲಶಾಲಿಯಾದ ಸೈನಿಕನಾಗುವೆ. ನೀನು ನನಗೆ ಮಗನಂತಿರುವೆ! ನಂತರ ನೀನು ಹೋಗಿ ಯೆಹೋವನ ಯುದ್ಧಗಳಲ್ಲಿ ಹೋರಾಡು” ಎಂದು ಹೇಳಿದನು. ಆದರೆ ಇದೊಂದು ಮೋಸವಾಗಿತ್ತು. “ಈಗ ನಾನು ದಾವೀದನನ್ನು ಕೊಲ್ಲುವ ಅಗತ್ಯವಿಲ್ಲ. ನನಗೋಸ್ಕರ ಫಿಲಿಷ್ಟಿಯರೇ ಅವನನ್ನು ಕೊಲ್ಲುವಂತೆ ಮಾಡುತ್ತೇನೆ” ಎಂಬದು ಸೌಲನ ನಿಜವಾದ ಆಲೋಚನೆಯಾಗಿತ್ತು.
IRVKN {ದಾವೀದನು ಸೌಲನ ಅಳಿಯನಾದದ್ದು} PS ಒಂದು ದಿನ ಸೌಲನು, ಇವನು ನನ್ನ ಕೈಯಿಂದಲ್ಲ ಫಿಲಿಷ್ಟಿಯರ ಕೈಯಿಂದ ಸಾಯಲಿ ಎಂದು ಆಲೋಚಿಸಿಕೊಂಡು ದಾವೀದನಿಗೆ, “ನನ್ನ ವೀರನಾಗಿ ಹೋಗಿ ಯೆಹೋವನ ಯುದ್ಧಗಳನ್ನು ನಡಿಸು. ನಾನು ನನ್ನ ಹಿರೀ ಮಗಳಾದ ಮೇರಬಳನ್ನು ನಿನಗೆ ಮದುವೆ ಮಾಡಿಕೊಡುತ್ತೇನೆ” ಅಂದನು.