Bible Language

Genesis 27:36 (ERVKN) Easy to Read Version - Kannadam

Versions

KNV   ಅದಕ್ಕೆ ಅವನು--ಅವನಿಗೆ ಯಾಕೋಬನೆಂಬ ಹೆಸರು ಸರಿಯಲ್ಲವೋ. ಎರಡು ಸಾರಿ ಅವನು ನನ್ನನ್ನು ವಂಚಿಸಿದ್ದಾನೆ; ಅವನು ನನ್ನ ಚೊಚ್ಚಲತನ ವನ್ನು ತಕ್ಕೊಂಡಿದ್ದಾನೆ; ಇಗೋ, ಈಗ ನನ್ನ ಆಶೀರ್ವಾದವನ್ನೂ ತಕ್ಕೊಂಡಿದ್ದಾನೆ. ನೀನು ನನಗೋಸ್ಕರ ಒಂದಾದರೂ ಆಶೀರ್ವಾದವನ್ನು ಉಳಿಸ ಲಿಲ್ಲವೋ ಅಂದನು.
ERVKN   ಏಸಾವನು, “ಅವನ ಹೆಸರು ಯಾಕೋಬ (ಮೋಸಗಾರ). ಅದೇ ಅವನಿಗೆ ಸರಿಯಾದ ಹೆಸರು. ಅವನು ಎರಡು ಸಲ ನನಗೆ ಮೋಸಮಾಡಿದನು. ನನ್ನ ಚೊಚ್ಚಲತನದ ಹಕ್ಕನ್ನು ತೆಗೆದುಕೊಂಡನು. ಈಗ ನನ್ನ ಆಶೀರ್ವಾದವನ್ನೂ ತೆಗೆದುಕೊಂಡನು” ಎಂದು ಹೇಳಿದನು. ನಂತರ ಏಸಾವನು, “ನನಗೋಸ್ಕರ ಯಾವ ಆಶೀರ್ವಾದವೂ ಉಳಿದಿಲ್ಲವೆ?” ಎಂದು ಕೇಳಿದನು.
IRVKN   ಅದಕ್ಕೆ ಏಸಾವನು, * ಯಾಕೋಬ ಅಂದರೆ ಪಾದವನ್ನು ಹಿಡಿದು ಎಳೆದವನು ಅಥವಾ ವಂಚಕನು. ಯಾಕೋಬನೆಂಬ ಹೆಸರು ಅವನಿಗೆ ಉಂಟಾದದ್ದು ನ್ಯಾಯವಲ್ಲವೋ? ಎರಡು ಸಾರಿ ನನ್ನನ್ನು ವಂಚಿಸಿದ್ದಾನೆ, ಹಿಂದೆ ನನ್ನ ಚೊಚ್ಚಲತನದ ಹಕ್ಕನ್ನು ಅಪಹರಿಸಿದನು; ಈಗ ಬಂದು ನನಗಾಗ ಬೇಕಾಗಿದ್ದ ಆಶೀರ್ವಾದವನ್ನೂ ತೆಗೆದುಕೊಂಡಿದ್ದಾನೆ” ಎಂದು ಹೇಳಿ ತನ್ನ ತಂದೆಯನ್ನು, “ನನಗೋಸ್ಕರವೂ ನಿನ್ನ ಬಳಿ ಆಶೀರ್ವಾದವಿಲ್ಲವೋ” ಎಂದು ಕೇಳಲು, PEPS