Bible Language

Numbers 18:19 (EXODUS_16_4)

Versions

KNV   ಇಸ್ರಾಯೇಲ್‌ ಮಕ್ಕಳು ಕರ್ತನಿಗೆ ಎತ್ತುವ ಪರಿಶುದ್ಧವಾದ ಅರ್ಪಣೆಗಳನ್ನೆಲ್ಲಾ ನಿನಗೂ ನಿನ್ನ ಕುಮಾರರಿಗೂ ಕುಮಾರ್ತೆಯರಿಗೂ ನಿತ್ಯ ಕಟ್ಟಳೆ ಯಾಗಿ ಕೊಟ್ಟಿದ್ದೇನೆ; ಇದು ಕರ್ತನ ಮುಂದೆ ನಿನಗೂ ನಿನ್ನ ಸಂಗಡ ಇರುವ ನಿನ್ನ ಸಂತತಿಗೂ ನಿತ್ಯವಾದ ಉಪ್ಪಿನ ಒಡಂಬಡಿಕೆಯಾಗಿರಬೇಕು.
ERVKN   ಇಸ್ರೇಲರು ಯೆಹೋವನಿಗೋಸ್ಕರ ಪ್ರತ್ಯೇಕಿಸಿ ಸಮರ್ಪಿಸುವ ಪವಿತ್ರ ವಸ್ತುಗಳೆಲ್ಲವನ್ನು ನಿನಗೂ ನಿನ್ನ ಸಂತತಿಯವರಾದ ಸ್ತ್ರೀಪುರುಷರೆಲ್ಲರಿಗೂ ಶಾಶ್ವತವಾದ ಪಾಲಾಗಿ ಅನುಗ್ರಹಿಸಿದ್ದೇನೆ. ಇದು ಯೆಹೋವನ ಸನ್ನಿಧಿಯಲ್ಲಿ ನಿನ್ನೊಡನೆಯೂ ನಿನ್ನ ನಂತರದ ಸಂತತಿಯವರೊಡನೆಯೂ ಮಾಡಿಕೊಂಡ ಶಾಶ್ವತವಾದ ಉಪ್ಪಿನ ಒಡಂಬಡಿಕೆ.”