Bible Language

Genesis 17:19 (GNTBRP) Byzantine Greek New Testament

Versions

KNV   ಅದಕ್ಕೆ ದೇವರು--ನಿಶ್ಚಯ ವಾಗಿ ನಿನ್ನ ಹೆಂಡತಿಯಾದ ಸಾರಳು ನಿನಗೆ ಮಗನನ್ನು ಹೆರುವಳು. ಅವನಿಗೆ ಇಸಾಕನೆಂದು ಹೆಸರಿಡಬೇಕು. ಅವನ ಸಂಗಡಲೂ ತರುವಾಯ ಹುಟ್ಟುವ ಅವನ ಸಂತತಿಯವರ ಸಂಗಡಲೂ ನನ್ನ ಶಾಶ್ವತವಾದ ಒಡಂಬಡಿಕೆಯನ್ನು ಸ್ಥಾಪಿಸುವೆನು.
ERVKN   ಅದಕ್ಕೆ ದೇವರು ಅವನಿಗೆ, “ಇಲ್ಲ! ನಿನ್ನ ಹೆಂಡತಿಯಾದ ಸಾರಳಿಗೆ ಒಬ್ಬ ಮಗನು ಹುಟ್ಟುವನು. ನೀನು ಅವನಿಗೆ, “ಇಸಾಕ” ಎಂದು ಹೆಸರಿಡಬೇಕು. ನಾನು ಒಂದು ಒಡಂಬಡಿಕೆಯನ್ನು ಅವನೊಡನೆ ಮಾಡಿಕೊಳ್ಳುವೆನು. ಒಡಂಬಡಿಕೆಯು ಅವನ ಎಲ್ಲಾ ಸಂತತಿಯವರಲ್ಲಿಯೂ ಶಾಶ್ವತವಾಗಿರುವುದು.
IRVKN   ದೇವರು, “ಹಾಗಲ್ಲ ನಿನ್ನ ಹೆಂಡತಿಯಾದ ಸಾರಳಲ್ಲಿಯೇ ನಿನಗೆ ಮಗನು ಹುಟ್ಟುವನು. ಅವನಿಗೆ ‘ಇಸಾಕ’ ಎಂದು ಹೆಸರಿಡಬೇಕು. ಅವನ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸಿಕೊಳ್ಳುವೆನು; ಅದು ಅವನ ಸಂತತಿಯವರಲ್ಲಿಯೂ ಶಾಶ್ವತವಾಗಿರುವುದು.