Bible Language

Esther 8:9 (GNTERP) Textus Receptus Greek New Testament

Versions

KNV   ಆಗ ಅದೇ ಕಾಲದಲ್ಲಿ ಶೀವಾನ್‌ ಎಂಬುವ ಮೂರನೇ ತಿಂಗಳ ಇಪ್ಪತ್ತು ಮೂರನೇ ದಿವಸದಲ್ಲಿ ಅರಸನ ಲೇಖಕರು ಕರೆಯಲ್ಪಟ್ಟರು. ಮೊರ್ದೆಕೈ ಆಜ್ಞಾಪಿಸಿದ ಎಲ್ಲಾದರ ಪ್ರಕಾರ ಸಕಲ ಯೆಹೂದ್ಯರಿಗೂ ಭಾರತ ಮೊದಲು ಗೊಂಡು ಕೂಷಿನ ವರೆಗೂ ಇರುವ ನೂರಇಪ್ಪತ್ತೇಳು ಪ್ರಾಂತ್ಯಗಳ ಯಜಮಾನರಿಗೂ ಅಧಿಪತಿಗಳಿಗೂ ಪ್ರಧಾನರಿಗೂ ಪ್ರತಿ ಪ್ರಾಂತ್ಯಕ್ಕೆ ಅದರ ಬರಹದ ಪ್ರಕಾರವೂ ಪ್ರತಿ ಜನರಿಗೆ ಅವರ ಭಾಷೆಯ ಪ್ರಕಾ ರವೂ ಯೆಹೂದ್ಯರಿಗೆ ಅವರ ಬರಹದ ಪ್ರಕಾರವೂ ಅವರ ಭಾಷೆಯ ಪ್ರಕಾರವೂ ಬರೆಯಲ್ಪಟ್ಟಿತು.
ERVKN   ಕೂಡಲೇ ರಾಜಲೇಖಕರನ್ನು ಕರೆಯಿಸಿ ಅವರಿಂದ ಮೊರ್ದೆಕೈ ಹೇಳಿದಂತೆ ರಾಜಾಜ್ಞೆಯನ್ನು ಸಾಮ್ರಾಜ್ಯದ ನಾನಾ ಭಾಷೆಗಳಲ್ಲಿ ಬರೆಯಿಸಲಾಯಿತು. ಹಿಂದುಸ್ಥಾನದಿಂದ ಹಿಡಿದು ಇಥಿಯೋಪ್ಯದ ತನಕ ರಾಜ್ಯದ ನೂರಿಪ್ಪತ್ತೇಳು ಸಂಸ್ಥಾನಗಳ ಅಧಿಕಾರಿಗಳಿಗೆ, ಎಲ್ಲಾ ರಾಜ್ಯಪಾಲರಿಗೆ, ಜನನಾಯಕರಿಗೆ ಮತ್ತು ಯೆಹೂದ್ಯರಿಗೆ ಆಯಾ ಭಾಷೆಗಳ ಲಿಪಿಗಳಲ್ಲಿ ಮೂರನೇ ತಿಂಗಳಾದ ಸೀವಾನ್ ಮಾಸದ ಇಪ್ಪತ್ತಮೂರನೇ ದಿವಸದಲ್ಲಿ ಬರೆಯಿಸಲಾಯಿತು.
IRVKN   ಆಗ ರಾಜಲೇಖಕರು ಕರೆಯಲ್ಪಟ್ಟರು. ಅವರು ಬಂದು ಮೂರನೆಯ ತಿಂಗಳಾದ ಜೇಷ್ಠಮಾಸದ ಇಪ್ಪತ್ತಮೂರನೆಯ ದಿನದಲ್ಲಿ, ಮೊರ್ದೆಕೈಯ ಆಜ್ಞಾನುಸಾರ ಯೆಹೂದ್ಯರಿಗೂ, ಭಾರತ ಮೊದಲುಗೊಂಡು ಕೂಷಿನ ವರೆಗೂ ಇರುವ ನೂರ ಇಪ್ಪತ್ತೇಳು ಸಂಸ್ಥಾನಗಳ ಉಪರಾಜರಿಗೂ, ದೇಶಾಧಿಪತಿಗಳಿಗೂ ಮತ್ತು ಅಧಿಕಾರಿಗಳಿಗೂ ಪತ್ರಗಳನ್ನು ಬರೆದರು. ಪತ್ರಗಳು ಆಯಾ ಸಂಸ್ಥಾನಗಳ ಬರಹಗಳಲ್ಲಿಯೂ, ಆಯಾ ಜನಾಂಗಗಳ ಭಾಷೆಗಳಲ್ಲಿಯೂ ಇದ್ದವು. ಯೆಹೂದ್ಯರಿಗೆ ಬರೆದ ಪತ್ರಗಳು ಯೆಹೂದ್ಯ ಬರಹದಲ್ಲಿಯೂ, ಭಾಷೆಗಳಲ್ಲಿಯೂ ಲಿಖಿತವಾದವು.