Bible Language

Ecclesiastes 4 (GNTTRP) Tischendorf Greek New Testament

Versions

KNV   ಹೀಗೆ ನಾನು ತಿರುಗಿಕೊಂಡು ಸೂರ್ಯನ ಕೆಳಗೆ ನಡೆಯುತ್ತಿರುವ ಹಿಂಸೆಗಳನ್ನೆಲ್ಲಾ ನಾನು ಯೋಚಿಸಿದೆನು; ಹಿಂಸಿಸಲ್ಪಟ್ಟವರ ಕಣ್ಣೀರನ್ನೂ ಅವರನ್ನು ಆದರಿಸುವವರು ಯಾರೂ ಇಲ್ಲದಿರುವ ದನ್ನೂ ನೋಡಿದೆನು; ಅವರನ್ನು ಹಿಂಸೆಪಡಿಸುವವರ ಕಡೆಗೆ ಶಕ್ತಿ ಇತ್ತು; ಆದರೆ ಇವರನ್ನು ಆದರಿಸುವವನು ಯಾವನೂ ಇಲ್ಲ.
ERVKN   ನಾನು ದೃಷ್ಟಿಸಿ ನೋಡಿದಾಗ, ಅನೇಕ ಜನರು ಹಿಂಸೆಗೆ ಒಳಗಾಗಿರುವುದನ್ನು ಕಂಡೆನು. ಅವರ ಕಣ್ಣೀರನ್ನೂ ನೋಡಿದೆನು. ದುಃಖದಲ್ಲಿದ್ದ ಅವರನ್ನು ಸಂತೈಸಲು ಒಬ್ಬರೂ ಇರಲಿಲ್ಲ. ಹಿಂಸಕರು ಎಲ್ಲಾ ಅಧಿಕಾರವನ್ನು ಹೊಂದಿದ್ದರು; ಅವರಿಂದ ಹಿಂಸೆಗೆ ಒಳಗಾದವರನ್ನು ಸಂತೈಸಲು ಯಾರೂ ಇರಲಿಲ್ಲ.
IRVKN   ಮೇಲೆ ಪುನಃ ದೃಷ್ಟಿಸಿ ಸೂರ್ಯನ ಕೆಳಗೆ ನಡೆಯುತ್ತಿರುವ ಹಿಂಸೆಗಳನ್ನೆಲ್ಲಾ ನೋಡಿದೆನು.
ಆಹಾ! ಹಿಂಸೆಗೊಂಡವರ ಕಣ್ಣೀರನ್ನು ನೋಡು.
ಅವರನ್ನು ಸಂತೈಸುವವರು ಯಾರೂ ಇಲ್ಲ. ಅವರನ್ನು ಹಿಂಸಿಸುವವರಿಗೆ ಬಹಳ ಬಲ ಇದೆ.
ಹಿಂಸೆಗೊಂಡವರನ್ನು ಸಂತೈಸುವವರು ಒಬ್ಬರೂ ಇಲ್ಲ.