Bible Language

Judges 7:15 (GNTWHRP) Westcott-Hort Greek New Testament

Versions

KNV   ಗಿದ್ಯೋನನು ಕನಸಿನ ವಿವರವನ್ನೂ ಅದರ ಅರ್ಥವನ್ನೂ ಕೇಳಿದಾಗ ಅವನು ಆರಾಧಿಸಿ ಇಸ್ರಾ ಯೇಲ್‌ ದಂಡಿಗೆ ತಿರುಗಿ ಬಂದು--ಏಳಿರಿ, ಯಾಕಂದರೆ ಕರ್ತನು ಮಿದ್ಯಾನ್ಯರ ದಂಡನ್ನು ನಿಮ್ಮ ಕೈಗೆ ಒಪ್ಪಿಸಿ ಕೊಟ್ಟಿದ್ದಾನೆ ಎಂದು ಹೇಳಿದನು.
ERVKN   ಕನಸಿನ ಬಗ್ಗೆ ಮತ್ತು ಅದರ ಅರ್ಥದ ಬಗ್ಗೆ ಅವರು ಮಾತನಾಡುವುದನ್ನು ಕೇಳಿದ ಗಿದ್ಯೋನನು ಯೆಹೋವನಿಗೆ ತಲೆಬಾಗಿ ನಮಸ್ಕರಿಸಿದನು. ಆಮೇಲೆ ಗಿದ್ಯೋನನು ಇಸ್ರೇಲರ ಪಾಳೆಯಕ್ಕೆ ಹಿಂದಿರುಗಿದನು. ಗಿದ್ಯೋನನು ಜನರನ್ನು, “ಏಳಿರಿ! ಯೆಹೋವನು ಮಿದ್ಯಾನ್ಯರನ್ನು ಸೋಲಿಸಲು ನಮಗೆ ಸಹಾಯ ಮಾಡುತ್ತಾನೆ” ಎಂದು ಕೂಗಿಕರೆದನು.
IRVKN   ಗಿದ್ಯೋನನು ಕನಸನ್ನೂ, ಅದರ ಅರ್ಥವನ್ನೂ ಕೇಳಿದಾಗ ಯೆಹೋವನಿಗೆ ಅಡ್ಡಬಿದ್ದು, ಇಸ್ರಾಯೇಲರ ಪಾಳೆಯಕ್ಕೆ ಹಿಂದಿರುಗಿ ಬಂದು ಅವರಿಗೆ, “ಏಳಿರಿ, ಯೆಹೋವನು ಮಿದ್ಯಾನ್ಯರ ಪಾಳೆಯವನ್ನು ನಿಮ್ಮ ಕೈಗೆ ಒಪ್ಪಿಸಿದ್ದಾನೆ” ಅಂದನು.