Bible Language

2 Kings 25:17 (HCSB) Holman Christian Standard Bible

Versions

KNV   ಒಂದು ಸ್ತಂಭವು ಹದಿನೆಂಟು ಮೊಳ ಎತ್ತರವಾಗಿತ್ತು. ಅದರ ಮೇಲಿದ್ದ ಬೋದಿಗೆ ತಾಮ್ರ ದ್ದಾಗಿ ಮೂರು ಮೊಳ ಉದ್ದವಾಗಿತ್ತು. ಬೋದಿಗೆಯ ಸುತ್ತಲಿದ್ದ ಹೆಣೆತದ ಕೆಲಸವೂ ದಾಳಿಂಬರಗಳೂ ಎಲ್ಲಾ ತಾಮ್ರವಾಗಿತ್ತು. ಎರಡನೇ ಸ್ತಂಭಕ್ಕೆ ಇದರ ಹಾಗೆಯೇ ಹೆಣೆತದ ಕೆಲಸ ಉಂಟಾಗಿತ್ತು.
ERVKN   ಪ್ರತಿಯೊಂದು ಕಂಬವೂ ಸುಮಾರು ಇಪ್ಪತ್ತೇಳು ಅಡಿ ಉದ್ದವಾಗಿತ್ತು. ಕಂಬಗಳ ಮೇಲಿದ್ದ ಬೋದಿಗೆಗಳನ್ನು ತಾಮ್ರದಿಂದ ನಿರ್ಮಿಸಿದ್ದರು. ಪ್ರತಿಯೊಂದು ಬೋದಿಗೆಯೂ ನಾಲ್ಕುವರೆ ಅಡಿ ಉದ್ದವಾಗಿತ್ತು. ಪ್ರತಿಯೊಂದು ಬೋದಿಗೆಯ ಮೇಲೆ ಜಾಲರಿಯ ಆಕಾರವಿತ್ತು ಮತ್ತು ದಾಳಿಂಬೆ ಹಣ್ಣುಗಳ ಆಕಾರಗಳಿದ್ದವು. ಇವೆಲ್ಲವುಗಳನ್ನು ತಾಮ್ರದಿಂದಲೇ ಮಾಡಿದ್ದರು. ಎರಡು ಕಂಬಗಳೂ ಒಂದೇ ರೀತಿಯ ಆಕಾರದಲ್ಲಿದ್ದವು.
IRVKN   ಪ್ರತಿಯೊಂದು ಕಂಬವು ಹದಿನೆಂಟು ಮೊಳ ಎತ್ತರವಿತ್ತು. ಪ್ರತಿಯೊಂದರ ಮೇಲೆ ಮೂರು ಮೊಳ ಎತ್ತರವಾದ ಒಂದು ತಾಮ್ರದ ಕುಂಭವಿತ್ತು. ಕುಂಭಗಳ ಮೇಲೆ ಸುತ್ತಲೂ ತಾಮ್ರದ ಜಾಲರಿಯೂ ದಾಳಿಂಬೆ ಹಣ್ಣುಗಳೂ ಇದ್ದವು.