Bible Language

2 Kings 25:23 (HCSB) Holman Christian Standard Bible

Versions

KNV   ಆದರೆ ಬಾಬೆಲಿನ ಅರಸನು ಗೆದಲ್ಯನನ್ನು ಅಧಿಪತಿ ಯಾಗಿ ಮಾಡಿದ್ದಾನೆಂದು ದಂಡುಗಳ ಅಧಿಪತಿಗಳೂ ಅವರ ಜನರೂ ಕೇಳಿದ ಮೇಲೆ ನೆತನ್ಯನ ಮಗನಾದ ಇಷ್ಮಾಯೇಲನೂ ಕಾರೇಹನ ಮಗನಾದ ಯೋಹಾ ನನೂ ನೆಟೋಫದವನಾದ ತನ್ಹುಮೆತನ ಮಗನಾದ ಸೆರಾಯನೂ ಮಾಕಾತ್ಯರಲ್ಲಿ ಒಬ್ಬನ ಮಗನಾದ ಯಾಜನ್ಯನೂ ಅವರ ಜನರೂ ಮಿಚ್ಪದಲ್ಲಿದ್ದ ಗೆದಲ್ಯನ ಬಳಿಗೆ ಬಂದರು.
ERVKN   ಬಾಬಿಲೋನ್ ರಾಜನು ಗೆದಲ್ಯನನ್ನು ರಾಜ್ಯಪಾಲನನ್ನಾಗಿ ನೇಮಿಸಿರುವುದನ್ನು ಸೇನಾಧಿಪತಿಗಳು ಮತ್ತು ಅವನ ಜನರು ಕೇಳಿ ಮಿಚ್ಛದಲ್ಲಿದ್ದ ಗೆದಲ್ಯನ ಬಳಿಗೆ ಬಂದರು. ಸೇನಾಧಿಪತಿಗಳು ಯಾರೆಂದರೆ : ನೆತನ್ಯನ ಮಗನಾದ ಇಷ್ಮಾಯೇಲ, ಕಾರೇಹನ ಮಗನಾದ ಯೋಹಾನಾನ್, ನೆಟೋಫದವನೂ ತನ್ಹುಮೆತನ ಮಗನೂ ಆದ ಸೆರಾಯ, ಮಾಕಾನ್ಯನ ಮಗನಾದ ಯಾಜನ್ಯ.
IRVKN   ತಪ್ಪಿಸಿಕೊಂಡು ಉಳಿದಿದ್ದ ಯೆಹೂದ ಸೇನಾಧಿಪತಿಗಳು ಗೆದಲ್ಯನು ಬಾಬೆಲಿನ ಅರಸನಿಂದ ಅಧಿಪತಿಯಾಗಿ ನೇಮಿಸಲ್ಪಟ್ಟಿದ್ದಾನೆಂಬ ವರ್ತಮಾನವನ್ನು ಕೇಳಿ, ತಮ್ಮ ಜನರೊಡನೆ ಮಿಚ್ಪದಲ್ಲಿ ವಾಸವಾಗಿದ್ದ ಗೆದಲ್ಯನ ಬಳಿಗೆ ಹೋದರು. ಅವರು ಯಾರೆಂದರೆ, ನೆತನ್ಯನ ಮಗನಾದ ಇಷ್ಮಾಯೇಲನು, ಕಾರೇಹನ ಮಗನಾದ ಯೋಹಾನಾನ್, ನೆಟೋಫದವನಾದ, ತನ್ಹುಮೆತನ ಮಗನಾದ ಸೆರಾಯನು, ಮಾಕಾ ಊರಿನವನಾದ ಯಾಜನ್ಯನು ಇವರೇ.