Bible Language

Exodus 3:18 (HCSB) Holman Christian Standard Bible

Versions

KNV   ಅವರು ನಿನ್ನ ಮಾತನ್ನು ಕೇಳುವರು. ಆಗ ನೀನು ಇಸ್ರಾಯೇಲ್‌ ಹಿರಿಯರ ಸಹಿತವಾಗಿ ಐಗುಪ್ತದ ಅರಸನ ಬಳಿಗೆ ಹೋಗಿ ಅವನಿಗೆ--ಇಬ್ರಿಯರ ದೇವರಾಗಿರುವ ಕರ್ತನು ನಮಗೆ ಪ್ರತ್ಯಕ್ಷ ನಾಗಿದ್ದಾನೆ. ಆದದರಿಂದ ನಾವು ಅರಣ್ಯದಲ್ಲಿ ಮೂರು ದಿವಸ ಪ್ರಯಾಣಮಾಡಿ ನಮ್ಮ ದೇವರಾದ ಕರ್ತನಿಗೆ ಬಲಿಯನ್ನರ್ಪಿಸುವ ಹಾಗೆ ನಮ್ಮನ್ನು ಬಿಡು ಎಂದು ಕೇಳಿಕೊಳ್ಳುತ್ತೇವೆ ಎಂದು ಹೇಳಬೇಕು.
ERVKN   “ಹಿರಿಯರು ನಿನಗೆ ಕಿವಿಗೊಡುವರು. ಆಗ ನೀನು ಮತ್ತು ಹಿರಿಯರು ಈಜಿಪ್ಟಿನ ರಾಜನ ಬಳಿಗೆ ಹೋಗಿ, ‘ಇಬ್ರಿಯರ ದೇವರಾದ ಯೆಹೋವನು ನಮಗೆ ಕಾಣಿಸಿಕೊಂಡನು. ಆದ್ದರಿಂದ ನಾವು ಮರುಭೂಮಿಯಲ್ಲಿ ಮೂರು ದಿನ ಪ್ರಯಾಣ ಮಾಡಿ ನಮ್ಮ ದೇವರಾದ ಯೆಹೋವನಿಗೆ ಯಜ್ಞಗಳನ್ನು ಸಮರ್ಪಿಸಬೇಕು’ ಎಂದು ಹೇಳಿರಿ.
IRVKN   ಅವರು ನಿನ್ನ ಮಾತಿಗೆ ಕಿವಿಗೊಡುವರು. ನೀನು ಮತ್ತು ಇಸ್ರಾಯೇಲರ ಹಿರಿಯರು ಐಗುಪ್ತದೇಶದ ಅರಸನ ಬಳಿಗೆ ಹೋಗಿ ಅವನಿಗೆ, “ಇಬ್ರಿಯರ ದೇವರಾಗಿರುವ ಯೆಹೋವನು ನಮಗೆ ಪ್ರತ್ಯಕ್ಷನಾದನು. ಆದುದರಿಂದ ನಾವು ಮರುಭೂಮಿಯಲ್ಲಿ ಮೂರು ದಿನದ ಪ್ರಯಾಣದಷ್ಟು ದೂರ ಹೋಗಿ ನಮ್ಮ ದೇವರಾಗಿರುವ ಯೆಹೋವನಿಗಾಗಿ ಯಜ್ಞಮಾಡಬೇಕಾಗಿದೆ, ಅದಕ್ಕೆ ಅಪ್ಪಣೆಯಾಗಬೇಕು” ಎಂದು ಕೇಳಿಕೊಳ್ಳಿರಿ.