Bible Language

1 Kings 2:8 (ISAIAH_14_1)

Versions

KNV   ಇದಲ್ಲದೆ ನಾನು ಮಹನಯಿಮಿಗೆ ಹೋಗುವ ದಿನದಲ್ಲಿ ಘೋರವಾದ ಶಾಪದಿಂದ ನನ್ನನ್ನು ಶಪಿಸಿದ ಬಹುರೀಮಿನ ಬೆನ್ಯಾ ವಿಾನನಾದ ಗೇರನ ಮಗನಾಗಿರುವ ಶಿಮ್ಮಿಯು ನಿನ್ನ ಬಳಿಯಲ್ಲಿದ್ದಾನೆ. ಅವನು ಯೊರ್ದನಿನ ಬಳಿಯಲ್ಲಿ ನನ್ನನ್ನು ಎದುರುಗೊಳ್ಳಲು ಬಂದದರಿಂದ ನಾನು ನಿನ್ನನ್ನು ಕತ್ತಿಯಿಂದ ಕೊಲ್ಲಿಸುವದಿಲ್ಲವೆಂದು ಕರ್ತನ ಹೆಸರಿನಲ್ಲಿ ಆಣೆ ಇಟ್ಟೆನು.
ERVKN   “ಗೇರನ ಮಗನಾದ ಶಿಮ್ಮಿಯು ನಿನ್ನೊಡನೆ ಇಲ್ಲಿದ್ದಾನೆಂಬುದನ್ನು ಜ್ಞಾಪಿಸಿಕೊ. ಅವನು ಬಹುರೀಮಿನ ಬೆನ್ಯಾಮೀನ್ ಕುಲದವನು. ನಾನು ಮಹನಯಿಮಿಗೆ ಓಡಿಹೋದ ದಿನದಂದು ಅವನು ನನ್ನ ವಿರುದ್ಧವಾಗಿ ಬಹಳವಾಗಿ ಶಪಿಸಿದ್ದನ್ನು ಜ್ಞಾಪಿಸಿಕೊ. ನಂತರ ಅವನು ನನ್ನನ್ನು ಜೋರ್ಡನ್ ನದಿಯ ಹತ್ತಿರ ಭೇಟಿಮಾಡಲು ಬಂದನು. ಆದರೆ ನಾನು ಯೆಹೋವನ ಸನ್ನಿಧಿಯಲ್ಲಿ, ‘ಶಿಮ್ಮಿ ನಾನು ನಿನ್ನನ್ನು ಕೊಲ್ಲುವುದಿಲ್ಲ’ ಎಂದು ವಾಗ್ದಾನ ಮಾಡಿದೆನು.