Bible Language

1 Kings 7:31 (KJV) King James Version

Versions

KNV   ಅಂಚಿಗೆ ಒಳಗಾದ ಅದರ ಬಾಯಿಯ ಮೇಲೆ ಒಂದು ಮೊಳ ಉದ್ದವಾಗಿತ್ತು. ಅದರ ಬಾಯಿ ದುಂಡಾಗಿ ಒಂದೂವರೆ ಮೊಳವಾಗಿತ್ತು; ಅದರ ಬಾಯಿಯ ಮೇಲೆ ಚಿತ್ರ ಗಳಿದ್ದವು; ಅದರ ಚಿತ್ರಗಳು ದುಂಡಾಗಿರದೆ ಚೌಕ ವಾಗಿದ್ದವು.
ERVKN   ಪಾತ್ರೆಯ ಮೇಲೆ ಒಂದು ಚೌಕಟ್ಟಿತ್ತು. ಅದು ಪಾತ್ರೆಯ ಮೇಲೆ ಹದಿನೆಂಟು ಇಂಚು ಎತ್ತರವಾಗಿತ್ತು. ಪಾತ್ರೆಯ ಬಾಯಿಯು ಇಪ್ಪತ್ತೇಳು ಇಂಚು ವ್ಯಾಸದೊಂದಿಗೆ ವೃತ್ತಾಕಾರವಾಗಿತ್ತು. ಚೌಕಟ್ಟಿನ ಹಿತ್ತಾಳೆಯ ಮೇಲೆ ಚಿತ್ರ ವಿನ್ಯಾಸಗಳನ್ನು ಬಿಡಿಸಲಾಗಿತ್ತು. ಚೌಕಟ್ಟು ವೃತ್ತಾಕಾರವಾಗಿರದೆ ಚೌಕಾಕಾರವಾಗಿತ್ತು.
IRVKN   ಗಂಗಾಳವನ್ನು ಇಡುವುದಕ್ಕೋಸ್ಕರ ಪೀಠದ ಮೇಲಣ ಭಾಗದಲ್ಲಿ ಒಂದು ಅಥವಾ ಒಂದುವರೆ ಮೊಳ ಎತ್ತರವಾದ ಬಾಯಿತ್ತು. ಚಕ್ರಾಕಾರವಾಗಿರುವ ಬಾಯಿಯು ಒಂದುವರೆ ಮೊಳ ಅಗಲವಾಗಿತ್ತು. ಇದರ ಮೇಲೆಯೂ ಚಿತ್ರಗಳಿದ್ದವು. ಇದಕ್ಕೆ ಆಧಾರವಾದ ಅಡ್ಡಪಟ್ಟಿಗಳು ಚಕ್ರಾಕಾರವಾಗಿರದೆ ಚೌಕಾಕಾರವಾಗಿದ್ದವು.