Bible Language

1 Samuel 25:39 (KJV) King James Version

Versions

KNV   ನಾಬಾಲನು ಸತ್ತನೆಂದು ದಾವೀದನು ಕೇಳಿದಾಗ ನನ್ನ ನಿಂದೆಯ ವ್ಯಾಜ್ಯವನ್ನು ನಾಬಾಲನಿಂದ ವಿಚಾರಿಸಿ ತನ್ನ ಸೇವಕ ನನ್ನು ಕೇಡುಮಾಡಗೊಡದ ಹಾಗೆ ಆಟಂಕಿಸಿದ ಕರ್ತನು ಸ್ತುತಿ ಹೊಂದಲಿ; ಯಾಕಂದರೆ ಕರ್ತನು ನಾಬಾಲನ ಕೆಟ್ಟತನವನ್ನು ಅವನ ತಲೆಯ ಮೇಲೆ ಬರಮಾಡಿದನು ಅಂದನು. ದಾವೀದನು ಅಬೀಗೈಲ ಳನ್ನು ತನಗೆ ಹೆಂಡತಿಯಾಗಿ ತಕ್ಕೊಳ್ಳುವದಕ್ಕಾಗಿ ಅವಳ ಸಂಗಡ ಮಾತನಾಡ ಕಳುಹಿಸಿದನು.
ERVKN   ನಾಬಾಲನು ಸತ್ತನೆಂಬುದು ದಾವೀದನಿಗೆ ತಿಳಿಯಿತು. ದಾವೀದನು, “ಯೆಹೋವನಿಗೆ ಸ್ತೋತ್ರವಾಗಲಿ! ನಾಬಾಲನು ನನ್ನ ಬಗ್ಗೆ ಕೆಟ್ಟಮಾತುಗಳನ್ನು ಆಡಿದನು, ಆದರೆ ಯೆಹೋವನು ನನಗೆ ಸಹಾಯ ಮಾಡಿದನು. ನಾನು ತಪ್ಪುಮಾಡದಂತೆ ಯೆಹೋವನು ನನ್ನನ್ನು ತಡೆದನು. ನಾಬಾಲನು ಕೆಟ್ಟದನ್ನು ಮಾಡಿದ್ದರಿಂದ ಯೆಹೋವನು ಅವನಿಗೆ ಸಾವನ್ನು ಬರಮಾಡಿದನು” ಎಂದು ಹೇಳಿದನು. ನಂತರ ದಾವೀದನು ಅಬೀಗೈಲಳಿಗೆ ಒಂದು ಸಂದೇಶವನ್ನು ಕಳುಹಿಸಿ ತನ್ನ ಹೆಂಡತಿಯಾಗಬೇಕೆಂದು ಕೇಳಿಕೊಂಡನು.
IRVKN   ನಾಬಾಲನು ಸತ್ತನೆಂಬ ವರ್ತಮಾನವು ದಾವೀದನು ಕೇಳಿ, “ನನಗೆ ಅಪಮಾನ ಮಾಡಿದ ನಾಬಾಲನಿಗೆ ಮುಯ್ಯಿತೀರಿಸಿದಂತ ಯೆಹೋವನಿಗೆ ಸ್ತೋತ್ರವಾಗಲಿ. ಆತನು ನನ್ನನ್ನು ಕೆಟ್ಟತನಕ್ಕೆ ದೂರಮಾಡಿ ನಾಬಾಲನ ಕೆಟ್ಟತನವನ್ನು ಅವನ ತಲೆಯ ಮೇಲೆಯೇ ಹೊರಿಸಿದನಲ್ಲಾ” ಎಂದು ಹೇಳಿದನು. ಅನಂತರ ಅವನು ಅಬೀಗೈಲಳನ್ನು ತನಗೆ ಹೆಂಡತಿಯಾಗಿರಬೇಕೆಂದು ದೂತರ ಮೂಲಕ ಹೇಳಿ ಕಳುಹಿಸಿದನು.