Bible Language

2 Chronicles 29:21 (KJV) King James Version

Versions

KNV   ಅವರು ರಾಜ್ಯಕ್ಕೋಸ್ಕರವೂ ಪರಿಶುದ್ಧ ಸ್ಥಾನಕ್ಕೋಸ್ಕರವೂ ಯೆಹೂದಕ್ಕೋಸ್ಕರವೂ ಪಾಪದ ಬಲಿಯಾಗಿ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಏಳು ಕುರಿಮರಿಗಳನ್ನೂ ಏಳು ಮೇಕೆ ಗಳನ್ನೂ ತಂದರು. ಆಗ ಕರ್ತನ ಬಲಿಪೀಠದ ಮೇಲೆ ಅವುಗಳನ್ನು ಅರ್ಪಿಸಲು ಆರೋನನ ಮಕ್ಕಳಾದ ಯಾಜಕರಿಗೆ ಹೇಳಿದನು.
ERVKN   ಅವರು ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಏಳು ಕುರಿಮರಿಗಳನ್ನೂ ಏಳು ಆಡುಗಳನ್ನೂ ತಂದರು. ಪ್ರಾಣಿಗಳನ್ನೆಲ್ಲಾ ಇಡೀ ಯೆಹೂದ ಪ್ರಾಂತ್ಯದಲ್ಲಿರುವ ಪ್ರಜೆಯವರಿಗಾಗಿ, ದೇವಾಲಯದ ಶುದ್ಧೀಕರಣಕ್ಕಾಗಿ ಮತ್ತು ಯೆಹೂದ ರಾಜ್ಯಕ್ಕಾಗಿ ಪಾಪಪರಿಹಾರ ಯಜ್ಞವಾಗಿ ಅರ್ಪಿಸಿದರು. ಅರಸನಾದ ಹಿಜ್ಕೀಯನು ಆರೋನನ ಸಂತತಿಯವರಾದ ಯಾಜಕರಿಗೆ ಪಶುಗಳನ್ನು ಯೆಹೋವನ ಯಜ್ಞವೇದಿಕೆಯ ಮೇಲೆ ಸರ್ವಾಂಗಹೋಮಮಾಡಲು ಆಜ್ಞಾಪಿಸಿದನು.