Bible Language

Daniel 10 (KJV) King James Version

Versions

KNV   ಪಾರಸಿಯ ಅರಸನಾದ ಕೋರೇಷನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಬೇಲ್ತೆ ಶಚ್ಚರನೆಂಬ ದಾನಿಯೇಲನಿಗೆ ಒಂದು ಸಂಗತಿಯು ಪ್ರಕಟವಾಯಿತು. ಬಹಳ ಕಷ್ಟದ ಸಂಗತಿಯು ಸತ್ಯವಾಗಿದೆ. ಅವನು ಕಂಡ ದರ್ಶನವನ್ನು ಗ್ರಹಿಸಿ ಸಂಗತಿಯನ್ನು ಮಂದಟ್ಟು ಮಾಡಿಕೊಂಡನು.
ERVKN   ಕೋರೆಷನು ಪಾರಸಿಯ ರಾಜನಾಗಿದ್ದನು. ಕೋರೆಷನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ದಾನಿಯೇಲನಿಗೆ ಒಂದು ಸಂಗತಿಯು ಪ್ರಕಟವಾಯಿತು. (ದಾನಿಯೇಲನ ಇನ್ನೊಂದು ಹೆಸರು ಬೇಲ್ತೆಶಚ್ಚರ.) ಸಂಗತಿ ಸತ್ಯವಾದುದು; ಆದರೆ ತಿಳಿದುಕೊಳ್ಳಲು ಬಹಳ ಕಷ್ಟಕರವಾಗಿತ್ತು. ದಾನಿಯೇಲನು ಸಂಗತಿಯನ್ನು ತಿಳಿದುಕೊಂಡನು. ಒಂದು ದರ್ಶನದಲ್ಲಿ ಅದರ ಬಗ್ಗೆ ಅವನಿಗೆ ವಿವರಿಸಲಾಯಿತು.