Versions
KNV ಅರ ಸರ ದಿವಸಗಳಲ್ಲಿ ಪರಲೋಕದ ದೇವರು ಎಂದಿಗೂ ನಾಶವಾಗದ ರಾಜ್ಯವನ್ನು ಸ್ಥಾಪಿಸುವನು. ಅದರ ರಾಜ್ಯ ವನ್ನು ಬೇರೆ ಜನರಿಗೆ ಕೊಡದೆ ಆ ರಾಜ್ಯಗಳನ್ನೆಲ್ಲಾ ಧ್ವಂಸ ಮಾಡಿ ಮುಗಿಸಿ ಎಂದೆಂದಿಗೂ ನಿಲ್ಲುವದು.
ERVKN “ನಾಲ್ಕನೇ ರಾಜ್ಯದ ಅರಸರ ಕಾಲದಲ್ಲಿ ಪರಲೋಕದ ದೇವರು ಇನ್ನೊಂದು ಹೊಸ ಸಾಮ್ರಾಜ್ಯವನ್ನು ಸ್ಥಾಪಿಸುವನು. ಈ ಸಾಮ್ರಾಜ್ಯವು ಎಂದೆಂದಿಗೂ ಉಳಿಯುವದು. ಎಂದಿಗೂ ಅಳಿಯದು; ಬೇರೊಂದು ಜನರ ಗುಂಪಿಗೆ ಹೋಗದಂಥ ಸಾಮ್ರಾಜ್ಯವಾಗಿರುವುದು. ಈ ಸಾಮ್ರಾಜ್ಯವು ಉಳಿದೆಲ್ಲ ಸಾಮ್ರಾಜ್ಯಗಳನ್ನು ನಾಶಮಾಡಿ ಕೊನೆಗಾಣಿಸುವುದು. ಆದರೆ ಆ ಸಾಮ್ರಾಜ್ಯವು ಮಾತ್ರ ಶಾಶ್ವತವಾಗಿ ನಿಲ್ಲುವದು.
IRVKN “ಆ ರಾಜರ ಕಾಲದಲ್ಲಿ ಪರಲೋಕದೇವರು ಒಂದು ರಾಜ್ಯವನ್ನು ಸ್ಥಾಪಿಸುವನು; ಅದು ಎಂದಿಗೂ ಅಳಿಯದು, ಅದರ ಪ್ರಾಬಲ್ಯವು ಬೇರೆ ಜನಾಂಗಕ್ಕೆ ಕದಲಿಹೋಗದು. ಆ ರಾಜ್ಯಗಳನ್ನೆಲ್ಲಾ ಭಂಗಪಡಿಸಿ ನಿರ್ನಾಮಮಾಡಿ ಶಾಶ್ವತವಾಗಿ ನಿಲ್ಲುವುದು.