Bible Language

2 Chronicles 7:6 (KJVP) King James Version with Strong Number

Versions

KNV   ಯಾಜಕರು ತಮ್ಮ ತಮ್ಮ ಸೇವೆಯಲ್ಲಿ ನಿಲ್ಲುತ್ತಿದ್ದರು; ಹಾಗೆಯೇ ದಾವೀ ದನು ತಮ್ಮ ಸೇವೆಗಾಗಿ ಹೊಗಳುತ್ತಾ ಕರ್ತನ ಕೃಪೆಯು ಯುಗಯುಗಕ್ಕೂ ಇರುವದೆಂದು ಅರಸನಾದ ದಾವೀ ದನು ಆತನನ್ನು ಕೊಂಡಾಡುವದಕ್ಕೆ ಮಾಡಿಸಿದ ಕರ್ತನ ಗೀತವಾದ್ಯಗಳನ್ನು ಲೇವಿಯರು ಹಿಡುಕೊಂಡಿದ್ದರು. ಯಾಜಕರು ಅವರ ಮುಂದೆ ತುತೂರಿಗಳನ್ನು ಊದಿ ದರು; ಸಮಸ್ತ ಇಸ್ರಾಯೇಲ್ಯರು ನಿಂತಿದ್ದರು.
ERVKN   ಯಾಜಕರು ತಮ್ಮ ಕೆಲಸಗಳನ್ನು ಮಾಡಲು ತಮ್ಮ ಸ್ಥಳಗಳಲ್ಲಿ ತಯಾರಾಗಿ ನಿಂತಿದ್ದರು. ಲೇವಿಕುಲದ ಗಾಯಕರು ತಮ್ಮ ವಾದ್ಯಗಳೊಂದಿಗೆ ದೇವರನ್ನು ಸ್ತುತಿಸಲು ನಿಂತಿದ್ದರು. ವಾದ್ಯಗಳನ್ನು ಅರಸನಾದ ದಾವೀದನು ದೇವರನ್ನು ಸ್ತುತಿಸುವದಕ್ಕೋಸ್ಕರ ತಯಾರಿಸಿದ್ದನು. ಯಾಜಕರೂ ಲೇವಿಯರೂ, ‘ದೇವರಾದ ಯೆಹೋವನ ಕೃಪೆಯು ನಿರಂತರವಾದದ್ದು’ ಎಂದು ಹೇಳುತ್ತಿದ್ದರು. ಯಾಜಕರು ಲೇವಿಯರಿಗೆ ಎದುರಾಗಿ ನಿಂತುಕೊಂಡು ತುತ್ತೂರಿಯನ್ನು ಊದಿದರು. ಇಸ್ರೇಲರೆಲ್ಲರೂ ನಿಂತುಕೊಂಡರು.
IRVKN   ಪ್ರತಿಯೊಬ್ಬ ಯಾಜಕನು ತನ್ನ ಸೇವೆಗನುಸಾರವಾಗಿ ನಿಂತರು. ಲೇವಿಯರೂ ಮತ್ತು ದಾವೀದ ರಾಜನು ಯೆಹೋವನ ಗಾಯನ ಸೇವೆಗೋಸ್ಕರ ಮಾಡಿಸಿದ ವಾದ್ಯಗಳನ್ನು ತಮ್ಮ ಕೈಗಳಲ್ಲಿ ಹಿಡಿದುಕೊಂಡು, ದೇವಾರಾಧನೆ ಮಾಡುತ್ತಾ, “ಆತನ ಕೃಪೆಯು ಶಾಶ್ವತವಾದದ್ದು” ಎಂಬುದಾಗಿ ಸ್ತುತಿ ಸಲ್ಲಿಸಿದರು. ಎಲ್ಲಾ ಯಾಜಕರು ಅವರ ಮುಂದೆ ತುತ್ತೂರಿಗಳನ್ನು ಊದಿದರು. ಸಮಸ್ತ ಇಸ್ರಾಯೇಲ್ಯರು ಎದ್ದು ನಿಂತಿದ್ದರು.