Bible Language

2 Kings 10:9 (KJVP) King James Version with Strong Number

Versions

KNV   ಉದಯ ಕಾಲದಲ್ಲಿ ಏನಾಯಿತೆಂದರೆ, ಅವನು ಹೊರಟು ನಿಂತು ಎಲ್ಲಾ ಜನರಿಗೆ ಹೇಳಿದ್ದೇನಂದರೆ -- ನೀವು ನೀತಿವಂತರು; ಇಗೋ, ನಾನು ನನ್ನ ಯಜಮಾನನ ಮೇಲೆ ಒಳಸಂಚು ಮಾಡಿ ಅವನನ್ನು ಕೊಂದುಹಾಕಿದೆನು.
ERVKN   ಮುಂಜಾನೆ, ಯೇಹು ಹೊರಗೆ ಬಂದು ಜನರ ಮುಂದೆ ನಿಂತು ಅವರಿಗೆ, “ನೀವು ನಿರಪರಾಧಿಗಳು. ನಾನಾದರೊ ನನ್ನ ಒಡೆಯನ ಮೇಲೆ ಒಳಸಂಚು ಮಾಡಿದವನು. ನಾನು ಅವನನ್ನು ಕೊಂದೆನು. ಆದರೆ ಅಹಾಬನ ಮಕ್ಕಳನ್ನೆಲ್ಲ ಕೊಂದವರು ಯಾರು? ನೀವು ಅವರನ್ನು ಕೊಂದಿದ್ದೀರಿ!
IRVKN   ಮರುದಿನ ಬೆಳಿಗ್ಗೆ ಯೇಹುವು ಅವುಗಳ ಹತ್ತಿರ ಹೋಗಿ ಎಲ್ಲಾ ಜನರ ಎದುರಿಗೆ ನಿಂತು ಅವರಿಗೆ, “ನೀವು ನಿರಪರಾಧಿಗಳು, ನಾನಾದರೋ ನನ್ನ ಯಜಮಾನನಿಗೆ ವಿರೋಧವಾಗಿ ಒಳಸಂಚು ಮಾಡಿ ಅವನನ್ನು ಕೊಂದವನು, ಆದರೆ ಇವರನ್ನೆಲ್ಲಾ ಹತಿಸಿದವರಾರು?