Versions
KNV ಅವನು ಅದೇ ಪ್ರಕಾರ ರೋಗಿಷ್ಟನ ಹಾಗೆ ಮಲಗಿದನು. ಅರಸನು ತನ್ನನ್ನು ನೋಡುವದಕ್ಕೆ ಬಂದಾಗ ಅಮ್ನೋನನು ಅರಸನಿಗೆ--ನೀನು ನನ್ನ ಸಹೋದರಿಯಾದ ತಾಮಾರಳು ಬರುವ ಹಾಗೆ ದಯಮಾಡಬೇಕು; ನಾನು ಅವಳ ಕೈಯಿಂದ ಉಣ್ಣುವ ಹಾಗೆ ಅವಳು ನನ್ನ ಕಣ್ಣುಮುಂದೆ ಎರಡು ಭಕ್ಷ್ಯಗಳನ್ನು ಮಾಡುವದಕ್ಕೆ ಬರಲಿ ಅಂದನು.
ERVKN ಅಮ್ನೋನನು ಹಾಸಿಗೆಯಲ್ಲಿ ಮಲಗಿ ಕಾಯಿಲೆಯವನಂತೆ ನಟಿಸಿದನು. ಅವನನ್ನು ನೋಡಲು ರಾಜನಾದ ದಾವೀದನು ಅಲ್ಲಿಗೆ ಬಂದನು. ಅಮ್ನೋನನು ರಾಜನಾದ ದಾವೀದನಿಗೆ, “ದಯವಿಟ್ಟು ನನ್ನ ಸೋದರಿಯಾದ ತಾಮಾರಳನ್ನು ಒಳಕ್ಕೆ ಕರೆಯಿರಿ. ನಾನು ನೋಡುತ್ತಿರುವಂತೆ ಅವಳು ನನಗಾಗಿ ಎರಡು ಸಿಹಿ ರೊಟ್ಟಿಗಳನ್ನು ತಯಾರಿಸಲಿ. ಅವಳ ಕೈಗಳಿಂದ ಮಾಡಿದ ರೊಟ್ಟಿಗಳನ್ನೇ ನಾನು ತಿನ್ನುತ್ತೇನೆ” ಎಂದು ಬೇಡಿಕೊಂಡನು.
IRVKN ಅಮ್ನೋನನು ಅಸ್ವಸ್ಥನಾದವನಂತೆ ಮಲಗಿಕೊಂಡನು. ಅರಸನು ಅವನನ್ನು ನೋಡುವುದಕ್ಕೆ ಬಂದಾಗ ಅವನು ಅರಸನಿಗೆ, “ದಯವಿಟ್ಟು ನನ್ನ ತಂಗಿಯಾದ ತಾಮಾರಳನ್ನು ನನ್ನ ಬಳಿಗೆ ಕಳುಹಿಸು. ಆಕೆ ನನಗೋಸ್ಕರ ನನ್ನ ಕಣ್ಣ ಮುಂದೆಯೇ ಆಹಾರವನ್ನು ಸಿದ್ಧಮಾಡಿಕೊಡುವುದಾದರೆ ಊಟಮಾಡುವೆನು” ಎಂದು ಹೇಳಿದನು.