Bible Language

2 Samuel 21:1 (KJVP) King James Version with Strong Number

Versions

KNV   ದಾವೀದನ ದಿವಸಗಳಲ್ಲಿ ವರುಷದಿಂದ ವರುಷಕ್ಕೆ ಮೂರು ವರುಷ ಬರ ಉಂಟಾ ಗಿತ್ತು. ಆಗ ದಾವೀದನು ಕರ್ತನನ್ನು ವಿಚಾರಿಸಿದನು. ಕರ್ತನು--ಸೌಲನು ಗಿಬ್ಯೋನ್ಯರನ್ನು ಕೊಂದುಹಾಕಿ ದ್ದರಿಂದ ಅವನಿಗೋಸ್ಕರವೂ ರಕ್ತಾಪರಾಧವುಳ್ಳ ಅವನ ಮನೆಗೋಸ್ಕರವೂ ಇದಾಗಿದೆ ಎಂದು ಹೇಳಿದನು.
ERVKN   ದಾವೀದನ ಕಾಲದಲ್ಲಿ ಒಮ್ಮೆ ಮೂರು ವರ್ಷಗಳವರೆಗೆ ಬರಗಾಲವಿತ್ತು. ದಾವೀದನು ಯೆಹೋವನಲ್ಲಿ ಪ್ರಾರ್ಥಿಸಿದನು. ಆಗ ಯೆಹೋವನು, “ಸೌಲನು ಮತ್ತು ಕೊಲೆಗಾರರಾದ ಅವನ ಕುಟುಂಬದವರು ಬರಗಾಲಕ್ಕೆ ಕಾರಣ. ಸೌಲನು ಗಿಬ್ಯೋನ್ಯರನ್ನು ಕೊಂದುದರಿಂದ ಈಗಿನ ಬರಗಾಲವು ಬಂದಿದೆ” ಎಂದು ಹೇಳಿದನು.
IRVKN   {ಗಿಬ್ಯೋನ್ಯರು ಮುಯ್ಯಿ ತೀರಿಸಿದ್ದು} PS ದಾವೀದನ ಕಾಲದಲ್ಲಿ ಮೂರು ವರ್ಷಗಳ ವರೆಗೂ ಎಡಬಿಡದೆ ಬರವಿತ್ತು. ದಾವೀದನು ಯೆಹೋವನನ್ನು ವಿಚಾರಿಸಲು ಆತನು, “ಸೌಲನು ಗಿಬ್ಯೋನ್ಯರನ್ನು ಕೊಲ್ಲಿಸಿದ್ದರಿಂದ ಅವನ ಮೇಲೆಯೂ, ಅವನ ಮನೆಯವರ ಮೇಲೆಯೂ ರಕ್ತಾಪರಾಧವಿದೆ” ಎಂದು ಉತ್ತರ ಕೊಟ್ಟನು.