Bible Language

Isaiah 50 (KNV) Kannadam Old BSI Version

Versions

KNV   ಕರ್ತನು ಹೀಗನ್ನುತ್ತಾನೆ--ನಾನು ಬಿಟ್ಟು ಬಿಟ್ಟದ್ದಕ್ಕೆ ನಿನ್ನ ತಾಯಿಯ ತ್ಯಾಗಪತ್ರವು ಎಲ್ಲಿ? ಇಲ್ಲವೆ ನಾನು ನನ್ನ ಸಾಲಗಾರರಲ್ಲಿ ಯಾರಿಗೆ ನಿಮ್ಮನ್ನು ಮಾರಿಬಿಟ್ಟೇನು? ಇಗೋ, ನಿಮ್ಮ ಅಕ್ರಮ ಗಳ ನಿಮಿತ್ತ ನಿಮ್ಮನ್ನು ನೀವೇ ಮಾರಿಕೊಂಡಿದ್ದೀರಿ; ನಿಮ್ಮ ದ್ರೋಹಗಳ ನಿಮಿತ್ತವೇ ನಿಮ್ಮ ತಾಯಿಯನ್ನು ಬಿಟ್ಟಿದ್ದೇನೆ.
ERVKN   ಯೆಹೋವನು ಹೇಳುವದೇನೆಂದರೆ; “ಇಸ್ರೇಲ್ ಜನರೇ, ನಾನು ನಿಮ್ಮ ತಾಯಿಯಾದ ಜೆರುಸಲೇಮಿಗೆ ವಿವಾಹವಿಚ್ಛೇದನ ಕೊಟ್ಟಿರುವುದಾಗಿ ಹೇಳುತ್ತೀರಿ. ಆದರೆ ನಾನು ಆಕೆಗೆ ವಿವಾಹವಿಚ್ಛೇದನ ಕೊಟ್ಟಿರುವುದಕ್ಕೆ ದಾಖಲೆ ಪತ್ರವೆಲ್ಲಿದೆ? ನನ್ನ ಮಕ್ಕಳೇ, ನಿಮ್ಮಲ್ಲಿ ಯಾರಿಗಾದರೂ ನಾನು ಸಾಲ ತೀರಿಸಬೇಕಿತ್ತೇ? ಸಾಲವನ್ನು ತೀರಿಸಲು ನಾನು ನಿಮ್ಮನ್ನು ಮಾರಿದ್ದೆನೋ, ಇಲ್ಲ. ನಾನು ನಿಮ್ಮನ್ನು ಮಾರಿಬಿಟ್ಟಿದ್ದು ನೀವು ಮಾಡಿದ ದುಷ್ಟತನಕ್ಕಾಗಿಯೇ. ನಿಮ್ಮ ತಾಯಿಯಾದ ಜೆರುಸಲೇಮನ್ನು ಕಳುಹಿಸಿಬಿಟ್ಟದ್ದು ನಿಮ್ಮ ಅಪರಾಧಗಳಿಗಾಗಿಯೇ.
IRVKN   ಯೆಹೋವನು ಹೀಗೆನ್ನುತ್ತಾನೆ,
“ನಾನು ನಿಮ್ಮ ತಾಯಿಯನ್ನು ತ್ಯಜಿಸಿದ ತ್ಯಾಗಪತ್ರವು ಎಲ್ಲಿ?
ನನ್ನ ಸಾಲಗಾರರಲ್ಲಿ ಯಾರಿಗೆ ನಿಮ್ಮನ್ನು ಮಾರಿಬಿಟ್ಟಿದ್ದೇನೆ?
ನೋಡಿರಿ, ನಿಮ್ಮ ದೋಷಗಳ ನಿಮಿತ್ತ ನಿಮ್ಮನ್ನು ಮಾರಿದೆನು, ನಿಮ್ಮ ದ್ರೋಹಗಳಿಗಾಗಿ ನಿಮ್ಮ ತಾಯಿಯನ್ನು ಬಿಟ್ಟೆನು.