Bible Language

Judges 16:18 (KNV) Kannadam Old BSI Version

Versions

KNV   ಅವನು ತನಗೆ ತನ್ನ ಹೃದಯವನ್ನೆಲ್ಲಾ ತಿಳಿಸಿದ್ದಾನೆಂದು ದೆಲೀಲಳು ತಿಳಿದು ಅವಳು ಫಿಲಿಷ್ಟಿಯರ ಅಧಿಪತಿಗಳಿಗೆ--ನೀವು ಸಾರಿ ಬನ್ನಿರಿ; ಅವನು ತನ್ನ ಹೃದಯವನ್ನೆಲ್ಲಾ ನನಗೆ ತಿಳಿಸಿದನು ಎಂದು ಕರೇಕಳುಹಿಸಿದಳು. ಆಗ ಫಿಲಿಷ್ಟಿಯರ ಅಧಿಪತಿಗಳು ಹಣವನ್ನು ತಮ್ಮ ಕೈಯಲ್ಲಿ ತಕ್ಕೊಂಡು ಅವಳ ಬಳಿಗೆ ಬಂದರು.
ERVKN   ಸಂಸೋನನು ತನ್ನ ರಹಸ್ಯವನ್ನು ತಿಳಿಸಿದನೆಂದು ದೆಲೀಲಳಿಗೆ ಗೊತ್ತಾಯಿತು. ಅವಳು ಫಿಲಿಷ್ಟಿಯ ಅಧಿಪತಿಗಳಿಗೆ ಸಂದೇಶವನ್ನು ಕಳುಹಿಸಿದಳು. ಅವಳು, “ಸಂಸೋನನು ನನಗೆ ಎಲ್ಲವನ್ನು ಹೇಳಿದ್ದಾನೆ, ಮತ್ತೊಮ್ಮೆ ಬನ್ನಿ” ಎಂದು ಹೇಳಿದಳು. ಫಿಲಿಷ್ಟಿಯ ಅಧಿಪತಿಗಳು ದೆಲೀಲಳ ಬಳಿಗೆ ಬಂದರು. ಅವರು ಅವಳಿಗೆ ಕೊಡುವುದಾಗಿ ಹೇಳಿದ್ದ ಹಣವನ್ನು ತಂದಿದ್ದರು.
IRVKN   ಅವನು ಇದ್ದದ್ದನ್ನು ಇದ್ದ ಹಾಗೆಯೇ ಹೇಳಿದನೆಂದು ದೆಲೀಲಳು ತಿಳಿದು ಫಿಲಿಷ್ಟಿಯ ಪ್ರಭುಗಳ ಬಳಿಗೆ ದೂತರನ್ನು ಕಳುಹಿಸಿ ಅವರಿಗೆ, “ಇದೊಂದು ಸಾರಿ ಬನ್ನಿರಿ: ಅವನು ನನಗೆ ತನ್ನ ಹೃದಯವನ್ನೆಲ್ಲಾ ತಿಳಿಸಿದ್ದಾನೆ” ಎಂದು ಹೇಳಿ, ಕರೆಕಳುಹಿಸಿದಳು. ಅವರು ಹಣವನ್ನು ತೆಗೆದುಕೊಂಡು ಆಕೆಯ ಬಳಿಗೆ ಬಂದರು.