Bible Language

1 Samuel 31:4 (LITV) Literal Translation of the Holy Bible

Versions

KNV   ಆದಕಾರಣ ಅವನು ತನ್ನ ಆಯುಧ ಹಿಡಿಯುವವನಿಗೆ--ಈ ಸುನ್ನತಿ ಇಲ್ಲದವರು ಬಂದು ನನ್ನನ್ನು ತಿವಿದುಬಿಟ್ಟು ಅವಮಾನ ಮಾಡದ ಹಾಗೆ ನೀನು ನಿನ್ನ ಕತ್ತಿಯನ್ನು ಹಿರಿದು ನನ್ನನ್ನು ಅದರಿಂದ ತಿವಿ ಅಂದನು. ಆದರೆ ಅವನ ಆಯುಧ ಹಿಡಿಯು ವವನು ಬಹು ಭಯಪಟ್ಟದ್ದರಿಂದ ಹಾಗೆ ಮಾಡ ಲೊಲ್ಲದೆ ಹೋದನು. ಆಗ ಸೌಲನು ತಾನೇ ಕತ್ತಿ ಯನ್ನು ತಕ್ಕೊಂಡು ಅದರ ಮೇಲೆ ಬಿದ್ದನು.
ERVKN   ಸೌಲನು ತನ್ನ ಅಯುಧವಾಹಕನಿಗೆ, “ನಿನ್ನ ಖಡ್ಗದಿಂದ ಇರಿದು ನನ್ನನ್ನು ಕೊಂದುಬಿಡು. ಆಗ, ಪರದೇಶೀಯರು ನನ್ನನ್ನು ಗಾಯಗೊಳಿಸುವುದಕ್ಕಾಗಲೀ ಅಪಹಾಸ್ಯ ಮಾಡುವುದಕ್ಕಾಗಲೀ ಸಾಧ್ಯವಾಗುವುದಿಲ್ಲ” ಎಂದನು. ಆದರೆ ಸೌಲನ ಆಯುಧವಾಹಕನು ನಿರಾಕರಿಸಿದನು. ಸೌಲನ ಸಹಾಯಕನು ಬಹಳ ಭಯಗೊಂಡಿದ್ದನು. ಆದ್ದರಿಂದ ಸೌಲನು ತನ್ನ ಸ್ವಂತ ಖಡ್ಗದಿಂದಲೇ ಇರಿದು ಆತ್ಮಹತ್ಯೆ ಮಾಡಿಕೊಂಡನು.
IRVKN   ಆದುದರಿಂದ ಸೌಲನು ಬಹು ಭೀತನಾಗಿ ತನ್ನ ಆಯುಧವಾಹಕನಿಗೆ “ನಿನ್ನ ಕತ್ತಿಯನ್ನು ಹಿರಿದು ನನ್ನನ್ನು ತಿವಿದು ಕೊಲ್ಲು. ಇಲ್ಲವಾದರೆ ಸುನ್ನತಿಯಿಲ್ಲದ ಜನರು ಬಂದು ನನ್ನನ್ನು ತಿವಿದು, ಅಪಕೀರ್ತಿಯನ್ನು ಉಂಟುಮಾಡಾರು” ಎಂದು ಹೇಳಲು ಅವನು ಹೆದರಿ, “ನಾನು ಕೊಲ್ಲಲಾರೆ” ಎಂದನು. ಆದುದರಿಂದ ಸೌಲನು ತಾನೇ ಕತ್ತಿಯನ್ನು ಹಿರಿದು ಅದರ ಮೇಲೆ ಬಿದ್ದನು.