Bible Language

2 Chronicles 16:9 (LITV) Literal Translation of the Holy Bible

Versions

KNV   ಕರ್ತನ ಸಮ್ಮುಖದಲ್ಲಿ ಪೂರ್ಣ ಹೃದಯವುಳ್ಳವರ ನಿಮಿತ್ತ ಬಲವನ್ನು ತೋರಿಸುವದಕ್ಕೆ ಆತನ ಕಣ್ಣುಗಳು ಸಮಸ್ತ ಭೂಮಿಯಲ್ಲಿ ಓಡಾಡುತ್ತವೆ. ಈಗ ನೀನು ಬುದ್ಧಿ ಹೀನನಾಗಿ ನಡಕೊಂಡಿದ್ದೀ. ನಿಶ್ಚಯವಾಗಿ ಇಂದಿನಿಂದ ನಿನಗೆ ಯುದ್ಧಗಳು ಉಂಟಾಗಿರುವವು ಅಂದನು.
ERVKN   ದೇವರು ಲೋಕವನ್ನೆಲ್ಲಾ ದೃಷ್ಟಿಸಿ ನೋಡಿ ತನ್ನ ನಂಬಿಗಸ್ತರನ್ನು ಕಂಡುಕೊಂಡು ಅವರನ್ನು ಬಲಿಷ್ಠರನ್ನಾಗಿ ಮಾಡುವನು. ಆಸನೇ, ನೀನು ಮೂರ್ಖ ಕೆಲಸ ಮಾಡಿದೆ. ಇಂದಿನಿಂದ ಯಾವಾಗಲೂ ನಿನಗೆ ಯುದ್ಧವಿರುವದು.”
IRVKN   ಯೆಹೋವನು ಭೂಲೋಕದ ಎಲ್ಲಾ ಕಡೆಗಳಲ್ಲಿಯೂ ದೃಷ್ಠಿಯನ್ನು ಹರಿಸುತ್ತಾ ತನ್ನ ಕಡೆಗೆ ಯಥಾರ್ಥಮನಸ್ಸುಳ್ಳವರ ರಕ್ಷಣೆಗಾಗಿ ತನ್ನ ಪ್ರತಾಪವನ್ನು ತೋರ್ಪಡಿಸುತ್ತಾನೆ. ನೀನು ಕಾರ್ಯದಲ್ಲಿ ಬುದ್ಧಿಹೀನನಾಗಿ ನಡೆದುಕೊಂಡಿರುವೆ; ಇನ್ನು ಮುಂದೆ ನಿನಗೆ ಯುದ್ಧಗಳು ಇದ್ದೇ ಇರುತ್ತವೆ” ಎಂದು ಹೇಳಿದನು.