Bible Language

2 Chronicles 18:2 (LITV) Literal Translation of the Holy Bible

Versions

KNV   ಕೆಲವು ವರುಷಗಳ ತರುವಾಯ ಅವನು ಅಹಾಬನ ಬಳಿಗೆ ಸಮಾರ್ಯಕ್ಕೆ ಹೋದನು; ಆಗ ಅಹಾಬನು ಅವನಿಗೋಸ್ಕರವೂ ಅವನ ಸಂಗಡ ಇದ್ದ ಜನರಿಗೋ ಸ್ಕರವೂ ಅನೇಕ ಕುರಿದನಗಳನ್ನು ಕೊಯಿಸಿ ತನ್ನ ಸಂಗಡ ಗಿಲ್ಯಾದಿನಲ್ಲಿರುವ ರಾಮೋತಿಗೆ ಹೋಗಲು ಪ್ರೇರೇಪಿಸಿದನು.
ERVKN   ಕೆಲವು ವರುಷಗಳ ನಂತರ ಯೆಹೋಷಾಫಾಟನು ಸಮಾರ್ಯ ಪಟ್ಟಣದಲ್ಲಿ ಅಹಾಬನನ್ನು ಸಂಧಿಸಲು ಹೋದನು. ಯೆಹೋಷಾಫಾಟನಿಗೂ ಅವನೊಂದಿಗೆ ಬಂದಿದ್ದ ಜನರಿಗೂ ಅಹಾಬನು ಅನೇಕ ದನಕುರಿಗಳನ್ನು ವಧಿಸಿ ಔತಣಮಾಡಿಸಿದನು. ರಾಮೋತ್‌ಗಿಲ್ಯೋದ್ ಪಟ್ಟಣದ ಮೇಲೆ ಯುದ್ಧಮಾಡಲು ಅಹಾಬನು ಯೆಹೋಷಾಫಾಟನನ್ನು ಪ್ರೇರೇಪಿಸಿದನು.
IRVKN   ಕೆಲವು ವರ್ಷಗಳಾದ ನಂತರ ಅವನ ಬಳಿಗೆ ಸಮಾರ್ಯಕ್ಕೆ ಹೋದನು. ಅಹಾಬನು ಅವನಿಗೂ ಅವನೊಡನೆ ಬಂದ ಜನರಿಗಾಗಿಯೂ ಹಿಂಡುಗಳಿಂದ ಅನೇಕ ದನಕುರಿಗಳನ್ನು ಕೊಯ್ದು ಔತಣವನ್ನು ಏರ್ಪಡಿಸಿದನು. ತನ್ನ ಸಂಗಡ ಯುದ್ಧಕ್ಕಾಗಿ ರಾಮೋತ್ ಗಿಲ್ಯಾದಿಗೆ ಬರಬೇಕೆಂದು ಅವನನ್ನು ಪ್ರೇರೇಪಿಸಿದನು.