Bible Language

2 Chronicles 19:10 (LITV) Literal Translation of the Holy Bible

Versions

KNV   ಇದಲ್ಲದೆ ರಕ್ತ ರಕ್ತಕ್ಕೂ ನ್ಯಾಯಕ್ಕೂ ಆಜ್ಞೆಗೂ ನಿಯಮಗಳಿಗೂ ನ್ಯಾಯ ತೀರ್ವಿಕೆಗಳಿಗೂ ತಮ್ಮ ಪಟ್ಟಣಗಳಲ್ಲಿ ವಾಸವಾಗಿರುವ ನಿಮ್ಮ ಸಹೋದರರಿಂದ ಯಾವ ಕಾರ್ಯವಾದರೂ ನಿಮ್ಮ ಮುಂದೆ ಬಂದರೆ ರೌದ್ರವು ನಿಮ್ಮ ಮೇಲೆಯೂ ನಿಮ್ಮ ಸಹೋದರರ ಮೇಲೆಯೂ ಬಾರದ ಹಾಗೆ ಕರ್ತನಿಗೆ ವಿರೋಧವಾಗಿ ಅಪರಾಧಮಾಡದಂತೆ ನೀವು ಅವರನ್ನು ಎಚ್ಚರಿಸಬೇಕು. ಇದನ್ನು ಮಾಡಿರಿ, ಆಗ ನೀವು ಅಪರಾಧವಿಲ್ಲದವರಾಗಿರುವಿರಿ.
ERVKN   ನಿಮ್ಮ ಬಳಿಗೆ ಕೊಲೆಯ ಪ್ರಕರಣಗಳ ಬಗ್ಗೆ, ಕಟ್ಟಳೆಯ ಬಗ್ಗೆ, ಆಜ್ಞೆಯ ಬಗ್ಗೆ, ನಿಯಮದ ಬಗ್ಗೆ ಮತ್ತು ಬೇರೆ ಯಾವುದಾದರೂ ಕಟ್ಟಳೆಯ ಬಗ್ಗೆ ಬಗೆಹರಿಸಲು ಬರಬಹುದು. ಅವೆಲ್ಲಾ ನಿಮ್ಮ ಸಹೋದರರಿಂದಲೇ ಬರುವವು. ದೇವರಿಗೆ ವಿರುದ್ಧವಾಗಿ ಪಾಪಮಾಡಬಾರದೆಂಬುದಾಗಿ ಅವರಿಗೆಲ್ಲಾ ಎಚ್ಚರಿಸಬೇಕು. ನೀವು ನಂಬಿಗಸ್ತಿಕೆಯಿಂದ ಸೇವೆಮಾಡದಿದ್ದಲ್ಲಿ ನಿಮ್ಮ ಮೇಲೆಯೂ ನಿಮ್ಮ ಸಹೋದರರ ಮೇಲೆಯೂ ದೇವರ ಕೋಪ ಉರಿಯುವಂತೆ ಮಾಡಿಕೊಳ್ಳುವಿರಿ. ನೀವು ತಪ್ಪಿತಸ್ಥರಾಗದೆ ನಂಬಿಗಸ್ತಿಕೆಯಿಂದ ಸೇವೆಮಾಡಿರಿ.
IRVKN   ಯೆಹೂದ ಪಟ್ಟಣಗಳಲ್ಲಿ ವಾಸಿಸುವ ನಿಮ್ಮ ಸಹೋದರರೊಳಗೆ ಜೀವಹತ್ಯ ಸಂಬಂಧದಲ್ಲಿಯಾಗಲಿ, ಧರ್ಮಶಾಸ್ತ್ರದ ಆಯಾ ಆಜ್ಞಾವಿಧಿ ನ್ಯಾಯಗಳ ಸಂಬಂಧದಲ್ಲಿಯಾಗಲಿ ವ್ಯಾಜ್ಯವುಂಟಾಗಿ, ಅದು ನಿಮ್ಮ ಮುಂದೆ ವಿಚಾರಣೆಗೆ ಬಂದರೆ, ನಿಮ್ಮ ಸಹೋದರರು ಯೆಹೋವನ ದೃಷ್ಟಿಯಲ್ಲಿ ಅಪರಾಧಿಗಳಾಗದಂತೆ ನೀವು ಅವರೊಂದಿಗೆ ದೇವರ ಕೋಪಕ್ಕೆ ಗುರಿಯಾಗದಂತೆ ಅವರನ್ನು ಎಚ್ಚರಿಸಿರಿ. ಹೀಗೆ ಮಾಡುವುದಾದರೆ ನೀವು ನಿರ್ದೋಷಿಗಳಾಗಿರುವಿರಿ.