Bible Language

2 Chronicles 36:13 (LITV) Literal Translation of the Holy Bible

Versions

KNV   ಇದಲ್ಲದೆ ಅವನು ದೇವರ ಮೇಲೆ ಆಣೆ ಇಡುವಂತೆ ಮಾಡಿದ ಅರಸನಾದ ನೆಬೂಕದ್ನೆಚ್ಚರನಿಗೆ ತಿರುಗಿ ಬಿದ್ದನು. ಹೇಗಂದರೆ ಅವನು ಇಸ್ರಾಯೇಲಿನ ದೇವರಾದ ಕರ್ತನ ಕಡೆಗೆ ತಿರುಗದೆಯೂ ತನ್ನ ಕುತ್ತಿಗೆ ಯನ್ನು ಬೊಗ್ಗಿಸದೆಯೂ ತನ್ನ ಹೃದಯವನ್ನು ಕಠಿಣ ಮಾಡಿಕೊಂಡನು.
ERVKN   ಚಿದ್ಕೀಯನು ನೆಬೂಕದ್ನೆಚ್ಚರನಿಗೆ ವಿರುದ್ಧವಾಗಿ ದಂಗೆ ಎದ್ದನು. ನೆಬೂಕದ್ನೆಚ್ಚರನು ತನಗೆ ವಿಧೇಯನಾಗಿರುವಂತೆ ಚಿದ್ಕೀಯನಿಂದ ಪ್ರಮಾಣ ಮಾಡಿಸಿಕೊಂಡಿದ್ದನು. ಚಿದ್ಕೀಯನು ದೇವರ ಹೆಸರಿನಲ್ಲಿ ಆಣೆಯಿಟ್ಟು ತಾನು ನೆಬೂಕದ್ನೆಚ್ಚರನಿಗೆ ನಂಬಿಗಸ್ತನಾಗಿರುವುದಾಗಿ ಪ್ರಮಾಣಮಾಡಿದ್ದನು. ಆದರೆ ಚಿದ್ಕೀಯನು ಮನಸ್ಸನ್ನು ಕಠಿಣಮಾಡಿಕೊಂಡು ಇಸ್ರೇಲಿನ ದೇವರಾದ ಯೆಹೋವನಿಗೆ ವಿಧೇಯನಾಗಲು ನಿರಾಕರಿಸಿದನು.
IRVKN   ಇದಲ್ಲದೆ, ಅರಸನಾದ ನೆಬೂಕದ್ನೆಚ್ಚರನಿಗೆ ಅಧೀನನಾಗಿರುತ್ತೇನೆ ಎಂದು ದೇವರ ಮೇಲೆ ಆಣೆಯಿಟ್ಟು ಪ್ರಮಾಣಮಾಡಿಸಿದ್ದ ನೆಬೂಕದ್ನೆಚ್ಚರನಿಗೆ ವಿರುದ್ಧವಾಗಿ ತಿರುಗಿಬಿದ್ದದ್ದಲ್ಲದೆ ಇಸ್ರಾಯೇಲ್ ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳದೆ ಹಠಮಾರಿಯಾಗಿ ತನ್ನ ಮನಸ್ಸನ್ನು ಕಠಿಣ ಮಾಡಿಕೊಂಡನು.