Bible Language

2 Samuel 17:20 (LITV) Literal Translation of the Holy Bible

Versions

KNV   ಅಬ್ಷಾಲೋಮನ ಸೇವಕರು ಮನೆಯೊಳಗೆ ಬಂದು ಸ್ತ್ರೀಯನ್ನು--ಅಹೀಮಾ ಚನೂ ಯೋನಾತಾನನೂ ಎಲ್ಲಿ ಎಂದು ಕೇಳಿದಾಗ ಅವಳು ಅವರಿಗೆ--ಹಳ್ಳವನ್ನು ದಾಟಿಹೋದರು ಅಂದಳು. ಅವರು ಹುಡುಕಿ ಕಾಣದೆ ಹೋಗಿ ಯೆರೂಸಲೇಮಿಗೆ ಹಿಂತಿರುಗಿದರು.
ERVKN   ಅಬ್ಷಾಲೋಮನ ಸೇವಕರು ಮನೆಯಲ್ಲಿದ್ದ ಹೆಂಗಸಿನ ಬಳಿಗೆ ಬಂದು, “ಅಹೀಮಾಚ್ ಮತ್ತು ಯೋನಾತಾನರು ಎಲ್ಲಿ?” ಎಂದು ಕೇಳಿದರು. ಸ್ತ್ರೀಯು ಅಬ್ಷಾಲೋಮನ ಸೇವಕರಿಗೆ, “ಅವರು ಈಗಾಗಲೇ ಹಳ್ಳವನ್ನು ದಾಟಿಹೋಗಿರಬೇಕು” ಎಂದಳು. ಆಗ ಅಬ್ಷಾಲೋಮನ ಸೇವಕರು ಯೋನಾತಾನ್ ಮತ್ತು ಅಹೀಮಾಚರನ್ನು ಹುಡುಕಲು ಹೋದರು. ಆದರೆ ಅವರು ಸೇವಕರಿಗೆ ಸಿಗಲಿಲ್ಲ. ಆದುದರಿಂದ ಅಬ್ಷಾಲೋಮನ ಸೇವಕರು ಜೆರುಸಲೇಮಿಗೆ ಹಿಂದಿರುಗಿದರು.
IRVKN   ಅಬ್ಷಾಲೋಮನ ಸೇವಕರು ಸ್ತ್ರೀಯ ಮನೆಗೆ ಹೋಗಿ, “ಅಹೀಮಾಚ ಮತ್ತು ಯೋನಾತಾನರು ಎಲ್ಲಿದ್ದಾರೆ?” ಎಂದು ಆಕೆಯನ್ನು ಕೇಳಿದ್ದಕ್ಕೆ ಆಕೆಯು, “ಅವರು ಹಳ್ಳ ದಾಟಿ ಹೋಗಿಬಿಟ್ಟರು” ಎಂದು ಉತ್ತರ ಕೊಟ್ಟಳು. ಅವರು ಅಹೀಮಾಚ ಮತ್ತು ಯೋನಾತಾನರನ್ನು ಹುಡುಕುವುದಕ್ಕೆ ಹೋಗಿ, ಕಾಣದೆ ಯೆರೂಸಲೇಮಿಗೆ ಹಿಂತಿರುಗಿದರು.