Bible Language

Exodus 33 (LITV) Literal Translation of the Holy Bible

Versions

KNV   ಕರ್ತನು ಮೋಶೆಗೆ--ನೀನು ಐಗುಪ್ತ ದೇಶದಿಂದ ಬರಮಾಡಿದ ಜನರ ಸಂಗಡ ಸ್ಥಳವನ್ನು ಬಿಟ್ಟು ನಾನು ಅಬ್ರಹಾಮ್‌ ಇಸಾಕ್‌ ಯಾಕೋಬರಿಗೂ--ನಿಮ್ಮ ಸಂತತಿಗೆ ಅದನ್ನು ಕೊಡು ವೆನು ಎಂದು ಹೇಳಿ ಪ್ರಮಾಣಮಾಡಿದ ದೇಶಕ್ಕೆ ಹೋಗು.
ERVKN   ತರುವಾಯ ಯೆಹೋವನು ಮೋಶೆಗೆ, “ನೀನು ಮತ್ತು ಈಜಿಪ್ಟಿನಿಂದ ನೀನು ಕರೆದುಕೊಂಡು ಬಂದ ಜನರು ಸ್ಥಳವನ್ನು ಬಿಡಬೇಕು. ನಾನು ಅಬ್ರಹಾಮನಿಗೆ, ಇಸಾಕನಿಗೆ ಮತ್ತು ಯಾಕೋಬನಿಗೆ ವಾಗ್ದಾನ ಮಾಡಿದ ದೇಶಕ್ಕೆ ಹೋಗಿ. ನಾನು ಅವರಿಗೆ ‘ನಿಮ್ಮ ನಂತರ ಜೀವಿಸುವ ನಿಮ್ಮ ಸಂತತಿಯವರಿಗೆ ದೇಶವನ್ನು ಕೊಡುವೆನು’ ಎಂದು ನಾನು ಅವರಿಗೆ ವಾಗ್ದಾನ ಮಾಡಿದ್ದೇನೆ.
IRVKN   {ಸೀನಾಯಿ ಬೆಟ್ಟವನ್ನು ಬಿಟ್ಟುಹೋಗಬೇಕೆಂಬ ಆಜ್ಞೆ} PS ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, “ನೀನು ಐಗುಪ್ತ ದೇಶದಿಂದ ಕರೆದುತಂದ ಜನರನ್ನು ನಿನ್ನ ಸಂಗಡ ಕರೆದುಕೊಂಡು ಸ್ಥಳವನ್ನು ಬಿಟ್ಟು, ‘ನಾನು ಅಬ್ರಹಾಮ, ಇಸಾಕ ಮತ್ತು ಯಾಕೋಬರಿಗೆ ಮತ್ತು ನಿಮ್ಮ ಸಂತತಿಯವರಿಗೆ ಕೊಡುವೆನೆಂದು’ ಪ್ರಮಾಣ ಮಾಡಿದ ದೇಶಕ್ಕೆ ಹೊರಟುಹೋಗು.