Bible Language

1 Kings 22:34 (LXXEN) English version of the Septuagint Bible

Versions

KNV   ಆದರೆ ಒಬ್ಬ ಮನುಷ್ಯನು ಗುರಿಯಿಡದೆ ಬಿಲ್ಲಿಗೆ ಬಾಣವನ್ನೇರಿಸಿ ಇಸ್ರಾಯೇಲಿನ ಅರಸನನ್ನು ಕವಚದ ಸಂದುಗಳಲ್ಲಿ ಹೊಡೆದನು; ಆದದರಿಂದ ಅವನು ತನ್ನ ರಥನಡಿಸುವವನಿಗೆ--ನೀನು ರಥವನ್ನು ತಿರುಗಿಸಿ ನನ್ನನ್ನು ಸೈನ್ಯದೊಳಗಿಂದ ಆಚೇ ಕಡೆಗೆ ತಕ್ಕೊಂಡು ಹೋಗು. ಯಾಕಂದರೆ ನಾನು ಗಾಯಗೊಂಡಿದ್ದೇನೆ ಅಂದನು.
ERVKN   ಆದರೆ ಒಬ್ಬ ಸೈನಿಕನು ಯಾರಿಗೂ ಗುರಿಯಿಡದೆ ಒಂದು ಬಾಣವನ್ನು ಗಾಳಿಯಲ್ಲಿ ಹೊಡೆದನು. ಆದರೆ ಅವನ ಬಾಣವು ಇಸ್ರೇಲಿನ ರಾಜನಾದ ಅಹಾಬನಿಗೆ ಬಡಿಯಿತು. ಬಾಣವು ರಾಜನ ದೇಹದ ಕವಚದ ಸಣ್ಣ ಸಂಧಿಯಲ್ಲಿ ತಾಕಿತು. ರಾಜನಾದ ಅಹಾಬನು ತನ್ನ ರಥದ ಸಾರಥಿಗೆ, “ಒಂದು ಬಾಣವು ನನಗೆ ತಾಕಿತು! ರಥವನ್ನು ಪ್ರದೇಶದಿಂದ ಹೊರಗೆ ಓಡಿಸು. ನಾವು ಯುದ್ಧದಿಂದ ಹೊರಟುಹೋಗಬೇಕಾಗಿದೆ” ಎಂದು ಹೇಳಿದನು.
IRVKN   ಅರಾಮ್ಯರ ಒಬ್ಬ ಸೈನಿಕನು ಯಾರಿಗೂ ಗುರಿಯಿಡದೆ ಬಾಣವನ್ನೆಸೆಯಲು ಬಾಣವು ಇಸ್ರಾಯೇಲ್ಯರ ಅರಸನಿಗೆ ಅವನ ಕವಚದ ಸಂದಿಯಲ್ಲಿ ತಾಗಿತು. ಆಗ ಅವನು ತನ್ನ ಸಾರಥಿಗೆ, “ರಥವನ್ನು ಹಿಂತಿರುಗಿಸಿ ನನ್ನನ್ನು ರಣರಂಗದಿಂದ ಆಚೆಗೆ ಕರೆದುಕೊಂಡು ಹೋಗು, ನನಗೆ ದೊಡ್ಡ ಗಾಯವಾಗಿದೆ” ಎಂದು ಹೇಳಿದನು.